ಮೈಸೂರು: ‘ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಸಲ್ಲದು’ ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷಾ ಹೇಳಿದರು.

ಇಲ್ಲಿನ ಸರಸ್ವತಿಪುರಂ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ರಸಾಯನವಿಜ್ಞಾನ ವಿಭಾಗದಿಂದ ಶುಕ್ರವಾರ ಹಮ್ಮಿಕೊಂಡಿದ್ದ ‘ಪರಿಸರ ವಿಜ್ಞಾನದಲ್ಲಿ ಸುಸ್ಥಿರ ಅಭಿವೃದ್ಧಿ’ ವಿಷಯದ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪರಿಸರ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದ್ದು, ನಮ್ಮ ಜೀವನಶೈಲಿಯಲ್ಲಿ ಗುರುತರ ಪಾತ್ರ ವಹಿಸುತ್ತದೆ. ಹೀಗಾಗಿ, ನಿಸರ್ಗವನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಆಲೋಚಿಸಿದಾಗ ಸುಸ್ಥಿರ ಅಭಿವೃದ್ಧಿ ಸಾಧ್ಯ’ ಎಂದರು.

ಆಶಯ ಭಾಷಣ ಮಾಡಿದ ನಿವೃತ್ತ ಪ್ರಾಧ್ಯಾಪಕ ಎ.ಜಿ. ದೇವಿಪ್ರಸಾದ್, ‘ನೈಸರ್ಗಿಕ ಸಂಪತ್ತನ್ನು ವಿವೇಕಪೂರ್ವಕವಾಗಿ ಬಳಸಿಕೊಳ್ಳಬೇಕು. ಪ್ರಕೃತಿ ಮಾನವ ಕುಲಕ್ಕೆ ಅಪಾರ ಕೊಡುಗೆ ನೀಡಿದೆ. ಸಂಪನ್ಮೂಲಗಳು ನಾಶಗೊಳ್ಳದಂತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂಬುದನ್ನು ಮರೆಯಬಾರದು’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ, ‘ಪರಿಸರ ಸಂರಕ್ಷಿಸದಿದ್ದರೆ ಮನುಷ್ಯ ಕುಲ ಕಂಟಕ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಪ್ರಾಂಶುಪಾಲ ರೇಚಣ್ಣ, ರಸಾಯನವಿಜ್ಞಾನ ವಿಭಾಗದ ಮುಖ್ಯಸ್ಥೆ ಡಿ.ಎಂ. ಲೋಕೇಶ್ವರಿ ಉಪಸ್ಥಿತರಿದ್ದರು.

ದಿಶಾ ಡಿ. ರಾವ್ ಮತ್ತು ಅನಘಾ ಪ್ರಾರ್ಥಿಸಿದರು. ವೈ.ಆರ್. ನಿರೀಕ್ಷಾ ಸ್ವಾಗತಿಸಿದರು. ಎನ್.ಎಸ್. ಸುಶ್ಮಿತಾ ವಂದಿಸಿದರು. ಡಿ.ವೈ. ತೃಪ್ತಿ ನಿರೂಪಿಸಿದರು.

ನಂತರ ನಡೆದ ಮೂರು ಗೋಷ್ಠಿಗಳಲ್ಲಿ ಸಹಾಯಕ ಪ್ರಾಧ್ಯಾಪಕಿ ರೂಪಾಂಜಲಿ ಎಸ್., ಸಹ ಪ್ರಾಧ್ಯಾಪಕಿ ಲತಾಮಣಿ ಆರ್. ಹಾಗೂ ಸಹಾಯಕ ಪ್ರಾಧ್ಯಾಪಕ ವಾದಿರಾಜ್ ಕೆ.ಟಿ. ವಿಷಯ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.