ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದೂಗಳಿಗೆ ಸನಾತನ ಬೋರ್ಡ್ ಸ್ಥಾಪಿಸಿ: ವಿಶ್ವ ಹಿಂದೂ ಪರಿಷತ್

Published : 26 ಸೆಪ್ಟೆಂಬರ್ 2024, 15:30 IST
Last Updated : 26 ಸೆಪ್ಟೆಂಬರ್ 2024, 15:30 IST
ಫಾಲೋ ಮಾಡಿ
Comments

ಮೈಸೂರು: ‘ಹಿಂದೂ ದೇವಾಲಯ ಮತ್ತು ಧಾರ್ಮಿಕ ಕೇಂದ್ರಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಿಗೊಳಿಸಬೇಕು’ ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.

‘ದೇಶದಲ್ಲಿ ಮುಸ್ಲಿಮರಿಗೆ ವಕ್ಫ್ ಬೋರ್ಡ್, ಕ್ರೈಸ್ತರಿಗೆ ಅವರದೇ ಬೋರ್ಡ್ ಇದ್ದು, ಬಹುಸಂಖ್ಯಾತರಾದ ಹಿಂದೂಗಳಿಗೆ ಸನಾತನ ಬೋರ್ಡ್ ರಚಿಸಬೇಕು. ಸರ್ಕಾರ ದೇವಸ್ಥಾನಗಳನ್ನು ಮುಜರಾಯಿ ಇಲಾಖೆಗೆ ಸೇರಿಸಿ ಭಕ್ತರ ದೇಣಿಗೆಯಿಂದ ದೇವಸ್ಥಾನಗಳು ನಡೆಯುವಂತೆ ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ದೇವಸ್ಥಾನದ ಆಡಳಿತ ಮಂಡಳಿಗೆ ಆಡಳಿತ ನಡೆಸಲು ಕೊಡಬೇಕು. ಮುಂದೆಂದೂ ಯಾವುದೇ ಧರ್ಮದವರು ಸರ್ಕಾರ ರಚಿಸಿದರೂ ಹಸ್ತಕ್ಷೇಪ ಮಾಡುವಂತಾಗಬಾರದು. ಈಚೆಗೆ ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿದೆ. ಆಂಧ್ರಪ್ರದೇಶದ ಹಿಂದಿನ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರನ್ನು ದೇವಾಲಯದ ಆಡಳಿತ ಮಂಡಳಿಗೆ ನೇಮಿಸಿದ್ದರಿಂದ ಘಟನೆ ನಡೆದಿದೆ’ ಎಂದು ಆರೋಪಿಸಿದರು.

ವಿಶ್ವ ಹಿಂದೂ ಪರಿಷತ್ ಮೈಸೂರು ಘಟಕದ ಅಧ್ಯಕ್ಷ ಮಹೇಶ್ ಕಾಮತ್, ಉಪಾಧ್ಯಕ್ಷ ಜಗದೀಶ್ ಹೆಬ್ಬಾರ್, ಅಂಬಿಕಾ ಜೀವನ್, ಸಹ ಕಾರ್ಯದರ್ಶಿ ಪುನೀತ್ ಜಿ.ಕೂಡ್ಲೂರು, ಜಯಶ್ರೀ ಶಿವರಾಂ, ಗೋರಕ್ಷಾ ಪ್ರಮುಖ್ ಶಿವರಾಜ್, ಸೇವಾ ಪ್ರಮುಖ್ ಲೋಕೇಶ್, ಸವಿತಾ ಘಾಟ್ಕೆ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT