ಪಿರಿಯಾಪಟ್ಟಣ: ‘ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಪಶು ಆಹಾರ (ಫೀಡ್ಸ್) ಕಾರ್ಖಾನೆ ಸ್ಥಾಪಿಸಲು ನಿರ್ಧರಿಸಲಾಗಿದೆ’ ಎಂದು ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ತಿಳಿಸಿದರು.

ಪಟ್ಟಣದ ಹರವೆ ಮಲ್ಲರಾಜ ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕಾರ್ಖಾನೆ ಸ್ಥಾಪನೆಯಿಂದ ಈ ಭಾಗದ ಅನೇಕರಿಗೆ ಉದ್ಯೋಗ ಸಿಗಲಿದೆ. ಮೈಮುಲ್ ವತಿಯಿಂದ ಹಾಲು ಉತ್ಪಾದಕರಿಗೆ ಮತ್ತು ಜಾನುವಾರುಗಳಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಉತ್ಪಾದಕರು ಗುಣಮಟ್ಟದ ಹಾಲನ್ನು ಪೂರೈಕೆ ಮಾಡ ಬೇಕು’ ಎಂದು ಸಲಹೆ ನೀಡಿದರು.

‘ಮೈಮುಲ್ ನಷ್ಟದಲ್ಲಿದ್ದರೂ ರೈತರಿಗೆ ಅನ್ಯಾಯವಾಗದಂತೆ ಯೋಜನೆಗಳನ್ನು ಜಾರಿಗೊಳಿಸ ಲಾಗುತ್ತಿದೆ. ತಾಲ್ಲೂಕಿನಲ್ಲಿ 180 ಸಹಕಾರ ಸಂಘಗಳಿವೆ. 200ಕ್ಕೂ ಹೆಚ್ಚಿನ ಸಂಘಗಳನ್ನು ಸ್ಥಾಪಿಸಲಾ ಗುವುದು. ಪ್ರತಿ ಗ್ರಾಮದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಿಸಲಾಗುವುದು’ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಕೆ.ಮಹದೇವ್ ಮಾತನಾಡಿ, ‘ನನ್ನ ಪುತ್ರ ಪಿ.ಎಂ.ಪ್ರಸನ್ನ ಮೈಮುಲ್ ನಿರ್ದೇಶಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ಜನಸಾಮಾನ್ಯರ ಮೂಲಸೌಕರ್ಯಗಳ ಸಮಸ್ಯೆಗಳನ್ನು ಬಗೆಹರಿಸಲು ಸೂಚಿಸಿದ್ದೆ. ಅದರಂತೆ ತಾಲ್ಲೂಕಿನಾದ್ಯಂತ ಹಾಲು ಉತ್ಪಾದಕರ ಏಳಿಗೆಗಾಗಿ ಶ್ರಮಿಸುತ್ತಿದ್ದಾನೆ. ಮೈಮುಲ್ ಅಧ್ಯಕ್ಷನಾಗಿ ಆಯ್ಕೆಯಾದ ನಂತರವೂ ಈ ಕೆಲಸವನ್ನು ಮುಂದುವರಿ ಸುತ್ತಿದ್ದಾನೆ’ ಎಂದು ಹೇಳಿದರು.

ಮೈಮುಲ್ ನಿರ್ದೇಶಕರಾದ ಸೋಮಶೇಖರ್, ರಾಜೇಂದ್ರ, ದಾಕ್ಷಾಯಣಿ, ಜಿಲ್ಲಾ ಉಪ ವ್ಯವಸ್ಥಾಪಕ ಡಾ.ಎನ್.ಕುಮಾರ್, ಸಂಘದ ಅಧ್ಯಕ್ಷೆ ದೀಪಿಕಾ ಮಂಜುನಾಥ್, ಪುರಸಭೆ ಅಧ್ಯಕ್ಷ ಮಂಜುನಾಥ್ ಸಿಂಗ್, ಉಪಾಧ್ಯಕ್ಷೆ ನಾಗರತ್ನಾ, ಸದಸ್ಯ ಪ್ರಕಾಶ್ ಸಿಂಗ್, ವಿಸ್ತರಣಾಧಿಕಾರಿಗಳಾದ ನಿಶ್ಚಿತ್, ಸಚ್ಚಿನ್, ಆಕಾಶ್, ವೀಣಾ, ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡ ಶಿವಶಂಕರ್, ಟಿ.ರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.