ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: ಮತ್ತೆರಡು ಜೆಎಸ್‌ಎಸ್‌ ವಿಶ್ವವಿದ್ಯಾಲಯಗಳ ಸ್ಥಾ‍ಪನೆ

Published 31 ಮೇ 2024, 16:05 IST
Last Updated 31 ಮೇ 2024, 16:05 IST
ಅಕ್ಷರ ಗಾತ್ರ

ಮೈಸೂರು: ‘ಜೆಎಸ್‌ಎಸ್‌ ಮಹಾವಿದ್ಯಾಪೀಠವು ಮಾರಿಷಸ್‌ ಹಾಗೂ ಉತ್ತರ ಪ್ರದೇಶದ ನೋಯ್ಡಾದಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದ್ದು, ಪ್ರಕ್ರಿಯೆಗಳು ಆರಂಭವಾಗಿವೆ’ ಎಂದು ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ.ಬೆಟ್‌ಸೂರಮಠ ತಿಳಿಸಿದರು. 

ನಗರದ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮೈಸೂರಿನಲ್ಲಿ ಜೆಎಸ್‌ಎಸ್‌ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಎಎಚ್‌ಇಆರ್ ವಿಶ್ವವಿದ್ಯಾಲಯಗಳಿವೆ. ಮಾರಿಷಸ್‌ನಲ್ಲಿದ್ದ ತಾಂತ್ರಿಕ ಕಾಲೇಜಿಗೆ ವಿಶ್ವವಿದ್ಯಾಲಯದ ಮಾನ್ಯತೆ ನೀಡಲಾಗಿದೆ. ಪದವಿ ಪ್ರಮಾಣ ಪತ್ರ ನೀಡಬಹುದಾಗಿದ್ದು, ಅಲ್ಲಿ ವೈದ್ಯಕೀಯ ಕಾಲೇಜನ್ನೂ ಸ್ಥಾಪಿಸಲಾಗುತ್ತಿದೆ’ ಎಂದರು.

‘ನೋಯ್ಡಾದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಯಿದ್ದು, ಇದೀಗ ವಿಶ್ವವಿದ್ಯಾಲಯ ತೆರೆಯಲು ಉತ್ತರ ಪ್ರದೇಶ ಸರ್ಕಾರದಿಂದ ಅನುಮತಿ ದೊರೆತಿದೆ. ಸಿಬ್ಬಂದಿ ನೇಮಕಾತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಯಿಂದ ಜೆಎಸ್‌ಎಸ್‌ ವಿಶ್ವವಿದ್ಯಾಲಯಗಳ ಸಂಖ್ಯೆ ನಾಲ್ಕಕ್ಕೇರಲಿದೆ’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT