ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣ್ಣಿನ ಶಸ್ತ್ರಚಿಕಿತ್ಸೆ: 10 ದಿನಗಳ ಶಿಬಿರಕ್ಕೆ ಚಾಲನೆ

Last Updated 3 ಫೆಬ್ರುವರಿ 2023, 13:55 IST
ಅಕ್ಷರ ಗಾತ್ರ

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರಿಗಾಗಿ ಆಯೋಜಿಸಿರುವ ಕಣ್ಣಿನ ಉಚಿತ ಶಸ್ತ್ರಚಿಕಿತ್ಸಾ ಶಿಬಿರಕ್ಕೆ ಶಾಸಕ ಎಸ್.ಎ.ರಾಮದಾಸ್ ಶುಕ್ರವಾರ ಚಾಲನೆ ನೀಡಿದರು.

ನಂತರ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಬಹಳಷ್ಟು ವಿಚಾರಗಳಿಗೆ ಆದ್ಯತೆ ನೀಡಿದ್ದಾರೆ. ಆ ಪೈಕಿ ಕೃಷಿಗೆ ಮೊದಲ ಸ್ಥಾನ ಕೊಡಲಾಗಿದೆ. ಮೂಲಸೌಕರ್ಯ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ರಾಜ್ಯದಲ್ಲಿ ನೇತ್ರಜ್ಯೋತಿ ಕಾರ್ಯಕ್ರಮ ನೀಡಿದ್ದಾರೆ. ಅದರ ಯಶಸ್ವಿ ಅನುಷ್ಠಾನ ನಮ್ಮ ಕ್ಷೇತ್ರದಲ್ಲಿ ಆಗಿದೆ’ ಎಂದು ಹೇಳಿದರು.

ನಗರದ ತುಳಸೀದಾಸ್ ದಾಸಪ್ಪ ಆಸ್ಪತ್ರೆಯಲ್ಲಿ 10 ದಿನಗಳವರೆಗೆ ಶಿಬಿರ ನಡೆಯಲಿದ್ದು, ನಿತ್ಯ 30 ಮಂದಿಯಂತೆ ಒಟ್ಟು 300 ಜನರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗುವುದು. ಶಿಬಿರಕ್ಕಾಗಿ ಆಸ್ಪತ್ರೆಯಲ್ಲಿ ವಿಶೇಷ ಘಟಕ ತೆರೆಯಲಾಗಿದೆ. ಔಷಧ ಹಾಗೂ ಕನ್ನಡಕವನ್ನು ಉಚಿತವಾಗಿ ನೀಡಲಾಗುತ್ತದೆ’ ಎಂದು ತಿಳಿಸಿದರು.

ಡಿಎಚ್‌ಒ ಡಾ.ಕೆ.ಎಚ್.ಪ್ರಸಾದ್, ನಗರಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT