ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರು ಅವರು ಬ್ಯಾಂಕ್ ಆಫ್ ಇಂಡಿಯಾದಲ್ಲಿ ₹ 5 ಲಕ್ಷ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ₹ 3 ಲಕ್ಷ ಸೇರಿದಂತೆ ಕೈ ಸಾಲ ಮಾಡಿದ್ದರು. ಈ ಸಾಲಿನಲ್ಲಿ ಮಳೆ ಹೆಚ್ಚಾದ್ದರಿಂದ 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ತಂಬಾಕು ಸಂಪೂರ್ಣ ನಷ್ಟವಾಗಿತ್ತು. ಸಾಲಬಾಧೆ ಸಹಿಸದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಅಶ್ವಿನಿ ದೂರಿನಲ್ಲಿ ತಿಳಿಸಿದ್ದಾರೆ.