ತಿ.ನರಸೀಪುರ: ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಿಂದ ಮಳವಳ್ಳಿಗೆ ಹೋಗಿ ಬರಲು ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಕೆಎಸ್ಆರ್ಟಿಸಿ ಮೈಸೂರು ನಗರದ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ಟಿ.ವೀರೇಶ್ಗೆ ಮನವಿ ಪತ್ರ ಸಲಿಸಲಾಯಿತು.

ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಮುಖಂಡತ್ವದಲ್ಲಿ ಸಂಘದ ಪದಾಧಿಕಾರಿಗಳು ಅಧಿಕಾರಿಯನ್ನು ಭೇಟಿ ಮಾಡಿ, ಗ್ರಾಮೀಣ ಭಾಗದಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳುತ್ತಿದ್ದಾರೆ. ತಿ.ನರಸೀಪುರದಿಂದ ಮಳವಳ್ಳಿಗೆ ಹೋಗಿ ಬರುವ ಮಾರ್ಗ ಮಧ್ಯದ ಮುಡುಕನಪುರ ಹಾಗೂ ಅಕ್ಕ ಪಕ್ಕದ ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರದ ಕಾರಣ ಹೆಚ್ಚು ಬಸ್ಸುಗಳ ಸೌಕರ್ಯ ಕಲ್ಪಿಸಿ ಕೊಡುವಂತೆ ಒತ್ತಾಯಿಸಿದರು.

ಅತ್ತಹಳ್ಳಿ ದೇವರಾಜು ಮಾತನಾಡಿ, ‘ಈ ಭಾಗದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯವಿಲ್ಲದೇ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಬಸ್ಸುಗಳು ಕಡಿಮೆ ಇವೆ. ಗರ್ಭಿಣಿಯರು, ವಯಸ್ಸಾದವರು ಆಸ್ಪತ್ರೆಗಳಿಗೆ ಹೋಗಿ ಬರಲು ಹರಸಾಹಸ ಪಡುವಂತಾಗಿದೆ. ರೈತರೂ ಕೆಲಸ ಕಾರ್ಯಗಳಿಗೆ ತೆರಳಲು ಪರದಾಡುವಂತಾಗಿದೆ’ ಎಂದರು.

ಜಿಲ್ಲಾ ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ತಾಲ್ಲೂಕು ಮಹಿಳಾ ಅಧ್ಯಕ್ಷೆ ರೂಪಾ, ತಲಕಾಡು ಚಂದ್ರಮ್ಮ, ಮಮತಾ, ಸಂಜನಾ, ಮುಖಂಡರಾದ ಯಾಕನೂರು ರಾಜೇಶ್, ಕರೋಹಟ್ಟಿ ಉಮೇಶ್, ರಾಮಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.