ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ ಹೇಳಿಕೆಗೆ ಕುರುಬೂರು ಶಾಂತಕುಮಾರ್ ಆಕ್ರೋಶ

Published 25 ಡಿಸೆಂಬರ್ 2023, 14:30 IST
Last Updated 25 ಡಿಸೆಂಬರ್ 2023, 14:30 IST
ಅಕ್ಷರ ಗಾತ್ರ

ಮೈಸೂರು: ಸಚಿವ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸಚಿವರು ರೈತರ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ. ಅವಿವೇಕದ ಪರಮಾವಧಿ ಇದು. ಬರಗಾಲ ಮೊದಲಾದ ಪ್ರಾಕೃತಿಕ ವಿಕೋಪದಿಂದ ಬೆಳೆ ನಷ್ಟವಾದ್ದರಿಂದ ನಾವು ಸಾಲ ಮನ್ನಾ ಮಾಡಿ ಎಂದು ಕೇಳುತ್ತಿದ್ದೇವೆ. ಅವರು ತಕ್ಷಣ ಕ್ಷಮೆ ಯಾಚಿಸದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ. ಅವರನ್ನು ಸಚಿವರ ಕಚೇರಿಯಿಂದ ನಾವೇ ಹೊರ ಹಾಕಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT