ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಪೊಲೀಸರ ಬಲೆಗೆ ಎಫ್‌ಡಿಎ ವಿಜಯ್ ಕುಮಾರ್

Published 17 ಮೇ 2024, 9:00 IST
Last Updated 17 ಮೇ 2024, 9:00 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ಪಟ್ಟಣದ ಸಿಡಿಪಿಒ ಕಚೇರಿಯ ಆವರಣದಲ್ಲಿ ಗುತ್ತಿಗೆದಾರನಿಂದ ₹30 ಸಾವಿರ ಲಂಚ ಪಡೆಯುತ್ತಿದ್ದ, ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಫ್‌ಡಿಎ ವಿಜಯ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದರು.

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಟೇಶ್ ಎಂಬುವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿಗೆ ಆಹಾರ ಪದಾರ್ಥಗಳ ಪೂರೈಕೆಗೆಂದು ತಮ್ಮ ಸರಕು ಸಾಗಣೆ ವಾಹನವನ್ನು ಗುತ್ತಿಗೆಗೆ ನೀಡಿದ್ದರು. ಹಣದ ಚೆಕ್ ನೀಡಲು ವಿಜಯಕುಮಾರ್ ಲಂಚಕ್ಕೆ ಒತ್ತಾಯಿಸಿದ್ದರು. ಇದರಿಂದ ಬೇಸತ್ತ ನಟೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಲೋಕಾಯುಕ್ತ ಎಸ್‌ಪಿ ಸಜ್ಜೀತ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ವಿ.ಕೃಷ್ಣಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT