ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಷಿತ ಸಮುದಾಯ ಕಾಂಗ್ರೆಸ್‌ ಬೆಂಬಲಿಸಿ: ರಾಮಚಂದ್ರಪ್ಪ

Published 6 ಏಪ್ರಿಲ್ 2024, 15:22 IST
Last Updated 6 ಏಪ್ರಿಲ್ 2024, 15:22 IST
ಅಕ್ಷರ ಗಾತ್ರ

ಮೈಸೂರು: ‘ಶೋಷಿತ ಸಮುದಾಯಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಬೇಕು. ಸಂವಿಧಾನ ಉಳಿಸುವ ಬದ್ಧತೆ ಪ್ರದರ್ಶಿಸುತ್ತಿರುವ ಕಾಂಗ್ರೆಸ್‌ಗೆ ಮತ ನೀಡಬೇಕು’ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾವು ಮೋಸ ಹೋಗಿದ್ದು ಸಾಕು. ಬಿಜೆಪಿ ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ಪರಿಸ್ಥಿತಿ, ಜನರ ಬದುಕು, ರಾಜಕೀಯ ಅವನತಿ ಗಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್‌ ಬೆಂಬಲಿಸಲು ಒಕ್ಕೂಟ ತೀರ್ಮಾನಿಸಿದೆ’ ಎಂದರು.

‘ಜನ ಸಾಮಾನ್ಯರಿಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ‌ ಕೇಂದ್ರ ಸರ್ಕಾರದ ಭರವಸೆಗಳು ಹುಸಿಯಾಗಿವೆ. ಜನಸಾಮಾನ್ಯರ ಬದುಕು ಹದಗೆಟ್ಟಿದೆ. ರಾಜ್ಯಕ್ಕೆ ಸತತವಾಗಿ ವಂಚನೆ ಎಸಗಿದೆ. ಇಂತಹ ಆಡಳಿತದ ಸರ್ಕಾರ ನಮಗೆ ಬೇಕೆ ಎಂದು ಆತ್ಮಾವಲೋಕನ ಮಾಡಿಕೊಳ್ಳುವ ಸಂದರ್ಭ ಇದೀಗ ಒದಗಿದೆ’ ಎಂದರು.

‘ಮೊದಿ ಸರ್ಕಾರ ಕಾರ್ಪೊರೇಟ್‌ಗಳಿಗೆ ಮಣೆ ಹಾಕಿದೆ. ಅವರ ಆಪ್ತರು, ಸ್ನೇಹಿತರು ಜಗತ್ತಿನ ಅತೀ ಶ್ರೀಮಂತರಾಗಿ‌ ಬೆಳೆಯುತ್ತಿದ್ದಾರೆ. ಅಲ್ಲದೆ, ಅಕ್ರಮ ಸಂಪತ್ತು ಕ್ರೂಢೀಕರಿಸಿಕೊಂಡು ಜಗತ್ತಿನ ಶ್ರೀಮಂತ ಪಕ್ಷವಾಗಿ ಬೆಳೆದು ನಿಂತಿದೆ. ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ, ಗಲಭೆ ಹೆಚ್ಚಾಗಿದ್ದು, ಪ್ರಜಾತಾಂತ್ರಿಕ ಮೌಲ್ಯಗಳು ಗಾಳಿಗೆ ತೂರಿದೆ’ ಎಂದು ದೂರಿದರು.

ಸಂಚಾಲಕರಾದ ಎಣ್ಣೆಗೆರೆ ಆರ್.ವೆಂಕಟರಾಮಯ್ಯ, ಅನಂತ‌ ನಾಯ್ಕ್, ರಾಜ್ಯ ಸಮಿತಿಯ ಸದಸ್ಯರಾದ ಆದರ್ಶ ಯಲ್ಲಪ್ಪ, ಬಿ.ಸುಬ್ರಮಣ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT