ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರೂಣಹತ್ಯೆ ಜಾಲ: ದಾಖಲಾಗದ ದೂರು

Published 30 ನವೆಂಬರ್ 2023, 19:37 IST
Last Updated 30 ನವೆಂಬರ್ 2023, 19:37 IST
ಅಕ್ಷರ ಗಾತ್ರ

ಮೈಸೂರು: ಹೆಣ್ಣು ಭ್ರೂಣಹತ್ಯೆ ಜಾಲ ಪ್ರಕರಣ ಬೆಳಕಿಗೆ ಬಂದ ಬಳಿಕ ನಗರದಲ್ಲಿ ಈ ಕುರಿತು ಈವರೆಗೆ ಯಾವುದೇ ದೂರು ಅಥವಾ ಪ್ರಕರಣ ದಾಖಲಾಗಿಲ್ಲ. ‘ಸ್ಥಳೀಯ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುವ ಅವಕಾಶವಿದೆ. ಆದರೆ ಪ್ರಯತ್ನ ಇನ್ನೂ ನಡೆದಿಲ್ಲ’ ಎಂಬ ಅಸಮಾಧಾನ ಸಾರ್ವಜನಿಕರಲ್ಲಿ ಮೂಡಿದೆ.

‘ಭ್ರೂಣಹತ್ಯೆ ಪ್ರಕರಣಗಳು ಆರೋಗ್ಯ ಇಲಾಖೆಯಲ್ಲಿರುವವರಿಗೆ ಗೊತ್ತಿಲ್ಲದ ವಿಚಾರವೇನಲ್ಲ. ಮೈಸೂರಿನ ಇನ್ನೂ ಕೆಲವು ಆಸ್ಪತ್ರೆಗಳಲ್ಲಿ ಭ್ರೂಣಹತ್ಯೆ ಪ್ರಕರಣಗಳು  ನಡೆದಿವೆ. ಇದು ಗೊತ್ತಿದ್ದೂ ಇಲಾಖೆ ಸುಮ್ಮನಿದೆ’ ಎಂಬ ಆರೋಪವೂ ಕೇಳಿಬಂದಿದೆ.

ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಅಲ್ಲಿನ ಅಧಿಕಾರಿಗಳೇ ತನಿಖೆ ನಡೆಸುತ್ತಿದ್ದಾರೆ. ಮೈಸೂರು, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈ ಜಾಲ ಹಬ್ಬಿರುವ ಕಾರಣ ಏಕೀಕೃತ ವ್ಯವಸ್ಥೆ ಅಡಿ ತನಿಖೆಯನ್ನು ನಿರ್ವಹಿಸಲಾಗುತ್ತಿದೆ.

‘ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಸ್ಥಳೀಯವಾಗಿ ದೂರು ದಾಖಲಾಗದ ಹೊರತು ನಾವು ತನಿಖೆ ಆರಂಭಿಸಲು ಆಗದು. ಈ ಹಿಂದೆಯೂ ಈ ವಿಚಾರವಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ಭ್ರೂಣಹತ್ಯೆ ಬಹಳ ಗುಟ್ಟಾಗಿ ನಡೆಯುತ್ತಿತ್ತು. ಆರೋಗ್ಯ ಇಲಾಖೆಗೆ ಸಾರ್ವಜನಿಕರಿಂದ ಲಿಖಿತವಾಗಿ ದೂರು ಬಂದಿರಲಿಲ್ಲ. ಮಾಧ್ಯಮಗಳ ವರದಿ ಆಧರಿಸಿ ಆರೋಪಿಯ ಆಸ್ಪತ್ರೆಗೆ ತೆರಳಿ ನೋಟಿಸ್ ಅಂಟಿಸಿದ್ದೆವು. ಇದೀಗ ಹಿರಿಯ ಅಧಿಕಾರಿಗಳೇ ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ’ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT