ಭಾರತೀಯ ದಂಡಸಂಹಿತೆ ಕಾಯ್ದೆಯ ಸೆಕ್ಷನ್ 120ಬಿ, 166, 403, 406, 420, 426, 465, 486, 340, 351 ಹಾಗೂ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 9, 13, ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ 1988ರ ಸೆಕ್ಷನ್ 3, 53, 54 ಹಾಗೂ ಕರ್ನಾಟಕ ಭೂ ಕಬಳಿಕೆ ಕಾಯ್ದೆ 2011ರ ಸೆಕ್ಷನ್ 3,4 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೈಸೂರು ತಾಲ್ಲೂಕಿನ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 462, 464ಕ್ಕೆ ಸಂಬಂಧಿಸಿದಂತೆ 1968ರಿಂದ 2023ರ ನವೆಂಬರ್ 9ರವರೆಗೆ ನಡೆದಿರುವ ಎಲ್ಲ ವಹಿವಾಟಿನ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲಿದ್ದಾರೆ.