ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

CM ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಪ್ರತಾಪಸಿಂಹ ವಿರುದ್ಧ FIR

Published 26 ಡಿಸೆಂಬರ್ 2023, 20:13 IST
Last Updated 26 ಡಿಸೆಂಬರ್ 2023, 20:13 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಸದ ಪ್ರತಾಪಸಿಂಹ ವಿರುದ್ಧ ನಗರದ ದೇವರಾಜ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ಎಫ್‌ಐಆರ್ ದಾಖಲಾಗಿದೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ. ವಿಜಯಕುಮಾರ್ ಅವರು ನೀಡಿದ ದೂರು ಆಧರಿಸಿ ಭಾರತೀಯ ದಂಡ ಸಂಹಿತೆ 504 (ಉದ್ದೇಶಪೂರ್ವಕವಾಗಿ ನಿಂದಿಸಿ ಶಾಂತಿಭಂಗ ಉಂಟುಮಾಡುವುದು), 153 (ಕೋಮುಗಳ ನಡುವೆ ದ್ವೇಷ ಹುಟ್ಟಿಸುವುದು) ಅಡಿ ಸಂಸದರ ವಿರುದ್ಧ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

‘ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾಧ್ಯಮಗಳ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಸೋಮಾರಿ ಸಿದ್ಧ’ ಎಂದು ಏಕವಚನದಲ್ಲಿ ಮಾತನಾಡಿ, ಜಾತಿ ಜಾತಿಗಳ ನಡುವೆ ದ್ವೇಷ ಹರಡಿಸುವ ಕೆಲಸ ಮಾಡಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ. ಪ್ರತಾಪ ಸಿಂಹ, ಹಿಂದೂ ಮುಸ್ಲಿಂ ಸಮುದಾಯದ ನಡುವೆ ಕೋಮುಗಲಭೆ ಮಾಡಲು ನಿರಂತರ ಪ್ರಯತ್ನ ಮಾಡಿದ್ದಾರೆ. ದಳ್ಳುರಿ ಸೃಷ್ಟಿಸಿ ಅಶಾಂತಿ ಉಂಟುಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮವಹಿಸಬೇಕು’ ಎಂದು ವಿಜಯಕುಮಾರ್‌ ದೂರಿನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT