ಮೈಸೂರು: ಕೆಆರ್ಎಸ್ ರಸ್ತೆಯಲ್ಲಿರುವ ಗೋಕುಲ್ ಚಿತ್ರಮಂದಿರದ ಆವರಣದಲ್ಲಿ ನಡೆದ ಅಗ್ನಿ ಅವಘಡದಲ್ಲಿ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಮರಿಶೆಟ್ಟಿ (75) ಸಜೀವ ದಹನವಾಗಿದ್ದಾರೆ.

‘ಗೋಕುಲ್ ಚಿತ್ರಮಂದಿರವು ಹಲವು ವರ್ಷದ ಹಿಂದೆಯೇ ಮುಚ್ಚಿದೆ. ಮರಿಶೆಟ್ಟಿ 45 ವರ್ಷದಿಂದ ಚಿತ್ರಮಂದಿರದಲ್ಲಿ ಕೆಲಸ ಮಾಡಿಕೊಂಡಿದ್ದು, ಅದು ಮುಚ್ಚಿದ ಬಳಿಕವೂ ಪತ್ನಿಯೊಂದಿಗೆ ಅಲ್ಲೇ ವಾಸವಿದ್ದರು. ಮಂಗಳವಾರ ಬೆಳಿಗ್ಗೆ ಆವರಣ ಸ್ವಚ್ಛಗೊಳಿಸುವಾಗ ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಅದು ವೇಗವಾಗಿ ಹರಡಿಕೊಂಡ ಕಾರಣ, ಮರಿಶೆಟ್ಟಿ ಅವರು ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ಮೃತರ ಪತ್ನಿ ಸ್ಥಳಕ್ಕೆ ಆಗಮಿಸಿ ನೋಡಿದಾಗ ಸುಟ್ಟು ಕರಕಳಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಮೃತರ ಪತ್ನಿ ನೀಡಿದ ದೂರು ಆಧರಿಸಿ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.