ಮದ್ದೂರು: ಪಟ್ಟಣದ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್ ಹಾವಳಿ ಹೆಚ್ಚಾಗಿದ್ದು, ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಹಾಗೂ ಸರ್ವಿಸ್ ರಸ್ತೆ ಬದಿಯ ಕಂಬಗಳಿಗೆ ಫ್ಲೆಕ್ಸ್ ಅಳವಡಿಸಿರುವುದರಿಂದ ನಗರದ ಸೌಂದರ್ಯ ಹಾಳಾಗಿರುವುದಲ್ಲದೇ, ವಾಹನ ಸಂಚಾರಕ್ಕೂ ತೊಂದರೆಯಾಗುತ್ತಿದೆ.

ರಸ್ತೆ ಬದಿ ಫ್ಲೆಕ್ಸ್ ಹಾಕುವಂತಿಲ್ಲ ಎಂದು ಹೆದ್ದಾರಿ ಪ್ರಾಧಿಕಾರದ ನಿಯಮವಿದ್ದರೂ, ಅವನ್ನು ಗಾಳಿಗೆ ತೂರಲಾಗಿದೆ. ಮಳೆ, ಗಾಳಿ ಬಂದಾಗ ಹರಿದ ಫ್ಲೆಕ್ಸ್ ಹಾಗೂ ಅದರಲ್ಲಿರುವ ಮರದ ತುಂಡು ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಯ ಮೇಲೆ ಬೀಳುವ ಸಾಧ್ಯತೆಗಳಿದ್ದು, ಕೆಳಗಡೆ ಸಂಚರಿಸುತ್ತಿರುವ ವಾಹನ ಸವಾರರಿಗೆ ತೊಂದರೆಯಾಗುವ ಸಾಧ್ಯತೆಗಳಿದೆ.

ಸಾರಿಗೆ ಬಸ್ ನಿಲ್ದಾಣದ ಬಳಿ, ಕೊಲ್ಲಿ ವೃತ್ತ, ಶಿವಪುರ ಹಾಗೂ ಟಿ.ಬಿ ವೃತ್ತದ ಬಳಿ ಇವುಗಳ ಸಂಖ್ಯೆ ಹೆಚ್ಚಿದೆ. ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜನ್ಮದಿನಾಚರಣೆ, ಹಬ್ಬ, ಹರಿದಿನಗಳ ಸಂದರ್ಭದಲ್ಲಿ ವಿವಿಧ ಬಣ್ಣದ ಫ್ಲೆಕ್ಸ್ ರಾರಾಜಿಸುತ್ತವೆ.

‘ಪುರಸಭಾ ಅಧಿಕಾರಿಗಳು ಇವನ್ನೂ ಕಂಡೂ, ಕಾಣದಂತೆ ವರ್ತಿಸುತ್ತಿದ್ದಾರೆ. ಸಾರ್ವಜನಿಕರಿಂದ ದೂರುಗಳು ಬಂದಾಗ ಮಾತ್ರ ಕ್ರಮ ಕೈಗೊಳ್ಳುತ್ತಾರೆ. ಮುಂದೆಯಾದರೂ ಅಧಿಕಾರಿಗಳು ಸ್ವಯಂಪ್ರೇರಿತವಾಗಿ ಕ್ರಮ ಕೈಗೊಳ್ಳಲಿ’ ಎಂಬುದು ಸ್ಥಳೀಯರಾದ ಅನಿಜಿತ್ ಒತ್ತಾಯಿಸಿದ್ದಾರೆ.

ಪಟ್ಟಣದ ವ್ಯಾಪ್ತಿಯಲ್ಲಿ ಹಾಕಲಾಗಿರುವ ಅನಧಿಕೃತ ಫ್ಲೆಕ್ಸ್ ತೆರವುಗೊಳಿಸಲು ಅದೇಶಿಸಿದ್ದೇನೆ ಮುಂದೆ ಈ ರೀತಿ ಎಲ್ಲೆಂದರಲ್ಲಿ ಫ್ಲೆಕ್ಸ್ ಹಾಕದಂತೆ ಕ್ರಮವಹಿಸಲಾಗುವುದು
ಮೀನಾಕ್ಷಿ ಪುರಸಭೆ ಮುಖ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.