ನಂಜನಗೂಡು: ತಾಲ್ಲೂಕಿನ ಸುತ್ತೂರು ಪಶು ಚಿಕಿತ್ಸಾಲಯ ವ್ಯಾಪ್ತಿಯ ಒಂಬತ್ತು ಗ್ರಾಮಗಳಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಬುಧವಾರ ಜಾನುವಾರುಗಳಿಗೆ 4ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕೆ ನೀಡಲಾಯಿತು.
ಪಶು ವೈದ್ಯಾಧಿಕಾರಿ ಲಿಖಿತ್ ಮಾತನಾಡಿ, ‘ನಮ್ಮ ವ್ಯಾಪ್ತಿಯಲ್ಲಿ ಎರಡು ಸಾವಿರ ರಾಸುಗಳಿಗೆ ಕಾಲುಬಾಯಿ ಜ್ವರದ ವಿರುದ್ಧ ಲಸಿಕೆಯನ್ನು ಹಾಕಲಾಗಿದೆ. ಅ. 25 ರವರೆಗೆ ಕಾರ್ಯಕ್ರಮ ಮುಂದುವರಿಯಲಿದೆ. 2 ಲಸಿಕೆಗಳನ್ನು ರಾಸುಗಳಿಗೆ ನೀಡಲಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಂದು ರೋಗ ಲಸಿಕೆಯನ್ನು ಪ್ರತಿ 4 ತಿಂಗಳಿಗೊಮ್ಮೆ ಹಾಗೂ ಕಾಲುಬಾಯಿ ಲಸಿಕೆಯನ್ನು ಪ್ರತಿ 6 ತಿಂಗಳಿಗೊಮ್ಮೆ ನೀಡಲಾಗುತ್ತಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.