ಹಂಪಾಪುರ(ಮೈಸೂರು ಜಿಲ್ಲೆ):ಸಮೀಪದ ಚಿಕ್ಕೆರೆಯೂರು ಗ್ರಾಮದ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಶುಕ್ರವಾರ ಚಿರತೆ ಬಿದ್ದಿದೆ. ಗ್ರಾಮದ ಅನಂದ ಎಂಬುವವರ ಜಮೀನಿನಲ್ಲಿ ಬೋನಿಡಲಾಗಿತ್ತು. ಅದು ಗಂಡು ಚಿರತೆ ಆಗಿದ್ದು, 4 ವರ್ಷ ವಯಸ್ಸಿನದ್ದು ಎನ್ನಲಾಗಿದೆ.

ಚಿರತೆಯು ಬೋನಿಗೆ ಬಿದ್ದಿರುವ ಮಾಹಿತಿಯನ್ನು ರೈತರು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದರು. ಸ್ಥಳಕ್ಕೆ ಬಂದ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಚಿರತೆಯ ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು.

ಚಿರತೆ ಬೋನಿಗೆ ಬಿದ್ದಿರುವ ಸುದ್ದಿ ಹರಡುತ್ತಿದ್ದಂತೆಯೇ, ವೀಕ್ಷಿಸುವುದಕ್ಕಾಗಿಯೇ ಗ್ರಾಮಸ್ಥರು ತಂಡೋಪ ತಂಡವಾಗಿ ಬಂದಿದ್ದರು.

ಈ ಭಾಗದಲ್ಲಿ ಇನ್ನೂ ಹೆಚ್ಚಿನ ಚಿರತೆಗಳಿವೆ. ಹೀಗಾಗಿ, ಗ್ರಾಮದಲ್ಲಿ ಮತ್ತೊಂದು ಬೋನಿಡಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.