ಮೈಸೂರು: ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿ ವಿವಾದಕ್ಕೆ ಒಳಗಾಗಿದ್ದ ನಳಿನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು ಜ. 27ಕ್ಕೆ ಮುಂದೂಡಿದೆ.
ಪಬ್ಲಿಕ್ ಪ್ರಾಸಿಕ್ಯೂಟರ್ ಆನಂದಕುಮಾರ್ ಶುಕ್ರವಾರ ನಳಿನಿ ಅವರ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ನಳಿನಿ ಪರವಾಗಿ 5 ಮಂದಿ ವಕೀಲರು ಮಂಡಿಸಿದ ವಾದವನ್ನು ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತು.