ಮೈಸೂರು: ಕೋವಿಡ್-19ನಿಂದ ತಂದೆ–ತಾಯಿ, ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ ನೀಡಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.

ಶುಕ್ರವಾರ ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಮೈಸೂರಿನ ಮಹಾರಾಜ ಕಾಲೇಜು, ಯುವರಾಜ ಕಾಲೇಜು, ವಿಶ್ವವಿದ್ಯಾಲಯದ ಸಂಜೆ ಕಾಲೇಜು, ಲಲಿತಕಲೆಗಳ ಕಾಲೇಜುಗಳಲ್ಲಿ ತಲಾ ಐವರಿಗೆ ಪ್ರವೇಶ ನೀಡಲಾಗುವುದು.

ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರಗಳಾದ ಮೈಸೂರಿನ ಮಾನಸಗಂಗೋತ್ರಿ, ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ಹಾಸನದ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರ ಹಾಗೂ ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರಗಳಲ್ಲಿ ತಲಾ ಮೂವರು ವಿದ್ಯಾರ್ಥಿಗಳಿಗೆಉಚಿತವಾಗಿ ಪ್ರವೇಶ ನೀಡಲಾಗುವುದು.

ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದರೆ ಮೆರಿಟ್ ಮೇರೆಗೆ ಆಯ್ಕೆ ಮಾಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ತಕ್ಷಣವೇ ಪರಿಹಾರ ಕಲ್ಪಿಸಿ: ಸುಪ್ರೀಂ ಸೂಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.