ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ‘ಕಾರ್ಮಿಕರಿಗೆ ಉದ್ಯೋಗ, ಕನಿಷ್ಠ ಕೂಲಿ ಕೊಡಿ’

ಎಐಟಿಯುಸಿ 11ನೇ ರಾಜ್ಯ ಸಮ್ಮೇಳನದಲ್ಲಿ 19 ನಿರ್ಣಯ ಅಂಗೀಕಾರ
Last Updated 1 ಜೂನ್ 2022, 12:50 IST
ಅಕ್ಷರ ಗಾತ್ರ

ಮೈಸೂರು: ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಡುವುದು, ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ಕೂಲಿ ತಿಂಗಳಿಗೆ ₹26 ಸಾವಿರ ನೀಡುವಂತೆ ಒತ್ತಾಯಿಸುವುದು ಸೇರಿದಂತೆ ಒಟ್ಟು 19 ನಿರ್ಣಯಗಳನ್ನು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ರಾಜ್ಯ ಸಮಿತಿಯಿಂದ ಮೇ 29ರಿಂದ 31ರವರೆಗೆ ಇಲ್ಲಿ ನಡೆದ 11ನೇ ರಾಜ್ಯ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದೆ.

ಕೋಮುವಾದಿ ರಾಜಕಾರಣವನ್ನು ಸೋಲಿಸಿ ಸಾಮಾಜಿಕ ಸೌಹಾರ್ದ, ಸಾಮರಸ್ಯ ಕಾಪಾಡಲು ಮುಂದಾಗಬೇಕು. ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಕೋವಿಡ್‌ನಿಂದಾಗಿ ಶೇ 67ರಷ್ಟು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ಮುಚ್ಚಿದ್ದು, ಈ ಪೈಕಿ ಶೇ 40ರಷ್ಟು ಕಾರ್ಖಾನೆಗಳು ಮತ್ತೆ ಆರಂಭವಾಗುವುದಿಲ್ಲ ಎಂದು ಸರ್ಕಾರವೇ ತಿಳಿಸಿದೆ. ಕೆಲಸ ಕಳೆದುಕೊಂಡಿರುವವರಿಗೆ ಉದ್ಯೋಗ ನೀಡಬೇಕು. 29 ಕಾರ್ಮಿಕ ಕಾಯ್ದೆಗಳ ಸಂಹಿತೆಯನ್ನು ಹಿಂಪಡೆಯಬೇಕು. ಸಾರ್ವಜನಿಕ ಉದ್ದಿಮೆಗಳಾದ ಹಟ್ಟಿ ಚಿನ್ನದ ಗಣಿ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ, ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್‌, ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮ ಮತ್ತು ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಶೇ 24ರಷ್ಟು ಷೇರುಗಳ ಮಾರಾಟಕ್ಕೆ ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ತೀರ್ಮಾನಿಸಲಾಗಿದೆ.

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರವನ್ನು ವಾಪಸ್‌ ಪಡೆಯಲು ₹35 ಕೋಟಿ ಪಡೆದಿರುವ ಕೋಡಿಹಳ್ಳಿ ಚಂದ್ರಶೇಖರ್‌ ವಿರುದ್ಧ ಸಿಬಿಐ ತನಿಖೆ ನಡೆಸಬೇಕು. ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ರದ್ದುಪಡಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಎಚ್‌.ಆರ್‌.ಶೇಷಾದ್ರಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಮಿತಿ ಅಧ್ಯಕ್ಷ ಎಚ್‌.ವಿ.ಅನಂತ ಸುಬ್ಬರಾವ್‌, ಕಾರ್ಯದರ್ಶಿ ಎಚ್‌.ಪಿ.ರಾಮಕೃಷ್ಣ, ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ಕೆ.ದೇವದಾಸ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT