ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಿನಬಳಕೆಗೆ ನೀರು ಕೊಡಿ’

ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ
Published 7 ಮಾರ್ಚ್ 2024, 5:48 IST
Last Updated 7 ಮಾರ್ಚ್ 2024, 5:48 IST
ಅಕ್ಷರ ಗಾತ್ರ

ಮೈಸೂರು: ‘ದಿನಬಳಕೆಗೆ ನೀರು ನೀಡಬೇಕು’ ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಕಾರ್ಯಕರ್ತರು ಹಾರ್ಡಿಂಜ್ ವೃತ್ತದ ಬಳಿ ಬುಧವಾರ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟಿಸಿದರು.

ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಮಾತನಾಡಿ, ‘ಬಿಸಿಲಿನ ಝಳ ಹೆಚ್ಚುತ್ತಿದ್ದು, ನೀರಿನ ಸಮಸ್ಯೆ ಆರಂಭವಾಗಿದೆ. ಬೆಂಗಳೂರು ಮತ್ತು ಮೈಸೂರು ನಗರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಜನರಿಗೆ ದಿನನಿತ್ಯ ಬಳಕೆಗೆ ಬೇಕಾದ ನೀರು ಪೂರೈಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅಧಿಕಾರಕ್ಕೆ ಬರುವ ಮೊದಲು ಕಾಂಗ್ರೆಸ್‌ ನೀಡಿದ ಭರವಸೆಯಂತೆ ಮೇಕೆದಾಟು ಯೋಜನೆಯನ್ನು ಕೂಡಲೇ ಆರಂಭಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ತಾಯೂರು ವಿಠಲ ಮೂರ್ತಿ, ಎಂ.ಚಂದ್ರಶೇಖರ್, ಬಿ.ಎ.ಶಿವಶಂಕರ, ಸುರೇಶ್‌ ಬಾಬು, ತೇಜೇಶ್‌ ಲೋಕೇಶ್‌ ಗೌಡ, ಪುಷ್ಪಾವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT