ಬೆಟ್ಟದಪುರ: ಗೊರಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ದೊಡ್ಡಮ್ಮ ತಾಯಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ರಥೋತ್ಸವಕ್ಕೆ ಸುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ದೇವಿಯ ದರ್ಶನ ಪಡೆದು ಹರಕೆ ಸಮರ್ಪಿಸಿದರು. ಗೊರಹಳ್ಳಿ, ಕುಳ್ಳಯ್ಯಕೊಪ್ಪಲು, ಕರಡಿಪುರ ಹಾಗೂ ದೇವಿನಗರ ಗ್ರಾಮಗಳ ಎಲ್ಲ ಸಮುದಾಯದವರು ಪಾಲ್ಗೊಂಡರು. ಶುಕ್ರವಾರ ಬೆಳಿಗ್ಗೆ ರಥದ ಮೇಲೆ ಕಳಸ ಪ್ರತಿಷ್ಠಾಪನೆ ಬಳಿಕ, ಉತ್ಸವ ಮೂರ್ತಿಯನ್ನು ಪಲ್ಲಕಿಯಲ್ಲಿ ಮೆರವಣಿಗೆಯೊಂದಿಗೆ ಕರೆತಂದು ರಥದ ಮೇಲೆ ಪ್ರತಿಷ್ಠಾಪಿಸಲಾಯಿತು.

ಗ್ರಾಮದ ಬಸವೇಶ್ವರ ದೇವಸ್ಥಾನದಿಂದ ದೊಡ್ಡಮ್ಮ ಹಾಗೂ ಚಿಕ್ಕಮ್ಮ ತಾಯಿ ದೇವಸ್ಥಾನದವರೆಗೆ ಸಾವಿರಾರು ಭಕ್ತರು ರಥವನ್ನು ಎಳೆದರು. ಗ್ರಾಮದೆಲ್ಲೆಡೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ವಿವಿಧ ಮಳಿಗೆಗಳು ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-38-1334664126

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.