ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ನೀಡದ ಸರ್ಕಾರ: ಧ್ರುವನಾರಾಯಣ ವಾಗ್ದಾಳಿ

Last Updated 6 ಡಿಸೆಂಬರ್ 2022, 12:46 IST
ಅಕ್ಷರ ಗಾತ್ರ

ಮೈಸೂರು: ‘ತೋರಿಕೆಗಷ್ಟೇ ಸಮಾಜದ ಏಳಿಗೆಗೆ ಶ್ರಮಿಸುತ್ತೇವೆಂದು ಬಿಜೆಪಿ ಮುಖಂಡರು ಹೇಳುತ್ತಾರೆ. ಆದರೆ, ಬಡವರ ವಿರುದ್ಧವಾಗಿಯೇ ನಡೆದುಕೊಳ್ಳುತ್ತಾರೆ. ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಕಳೆದ ಎರಡು ವರ್ಷಗಳಿಂದ ನೀಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ದೂರಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,‘ಸದನದಲ್ಲೂ ಈ ಬಗ್ಗೆ ಪ್ರಶ್ನೆ ಎತ್ತಿದ್ದರೂ ಬಿಡುಗಡೆಗೆ ಮುಂದಾಗಿಲ್ಲ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮವಹಿಸಿಲ್ಲ. ಜನರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

‘ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಜನರ ಮತದಾನದ ಹಕ್ಕನ್ನು ಕಸಿಯಲು ಬಿಜೆಪಿ ಮುಂದಾಗಿದೆ. 224 ಕ್ಷೇತ್ರದಲ್ಲೂ ಕಾಂಗ್ರೆಸ್‌ ಮತಗಟ್ಟೆ ಏಜೆಂಟ್‌ ನೇಮಕ ಮಾಡಿದ್ದು, ಮತದಾರರಲ್ಲಿ ಜಾಗೃತಿ ಹಾಗೂ ಪಟ್ಟಿಯಲ್ಲಿ ಕೈಬಿಡಲಾಗಿರುವ ಹೆಸರುಗಳ ಪತ್ತೆ ಕೆಲಸವನ್ನು ಕಾರ್ಯಕರ್ತರು ಮಾಡುತ್ತಿದ್ದಾರೆ’ ಎಂದು ಹೇಳಿದರು.

‘ಬೆಂಗಳೂರಿನಲ್ಲಿ ಬಿಜೆಪಿ ಮತಗಳಿಗೆ ಕನ್ನ ಹಾಕಿದ್ದರಿಂದ ಚುನಾವಣಾ ಆಯೋಗ ಕ್ರಮ ತೆಗೆದುಕೊಂಡಿದೆ. ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಅಮಾನತುಮಾಡಿದೆ. ಹಲವರು ಜೈಲಿನಲ್ಲಿದ್ದಾರೆ’ ಎಂದು ತಿಳಿಸಿದರು.

‘ಭಾರತ್‌ ಜೋಡೊ, ಮೇಕೆದಾಟು ಪಾದಯಾತ್ರೆ, ಸಿದ್ದರಾಮಯ್ಯ ಜನ್ಮದಿನೋತ್ಸವದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ. ಅದೇ ಮಾದರಿಯಲ್ಲಿ 2023ರಲ್ಲೂ ಜನರು ಕಾಂಗ್ರೆಸ್ ಬೆಂಬಲಿಸಲಿದ್ದಾರೆ. ಪಕ್ಷ ಸಂಘಟನೆ ಸಂಬಂಧ ಜನವರಿ ಮೊದಲ ವಾರಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿರಥಯಾತ್ರೆ ಆರಂಭವಾಗಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT