ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಪಂಜಿನ ಕವಾಯತಿಗೆ ರಾಜ್ಯಪಾಲರು ಗೈರು

Last Updated 5 ಅಕ್ಟೋಬರ್ 2022, 5:21 IST
ಅಕ್ಷರ ಗಾತ್ರ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಇಲ್ಲಿನ ಬನ್ನಿಮಂಟಪ ಮೈದಾನದಲ್ಲಿ ಇಂದು (ಬುಧವಾರ) ಸಂಜೆ 7.30ಕ್ಕೆ ಆರಂಭಗೊಳ್ಳಲಿರುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಗೈರು ಹಾಜರಾಗಲಿದ್ದಾರೆ.

ಕೋವಿಡ್–19 ಬಾಧಿತರಾಗಿರುವುದರಿಂದ ಅವರು ಪಾಲ್ಗೊಳ್ಳುತ್ತಿಲ್ಲ. ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ.

ಪಂಜಿತ ಕವಾಯತು ವೇಳೆ ರಾಜ್ಯಪಾಲರು ಗೌರವವಂದನೆ ಭಾಗವಹಿಸಿ ಗೌರವ ವಂದನೆ ಸ್ವೀಕರಿಸುವುದು ವಾಡಿಕೆ. ಆದರೆ, ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಅದನ್ನು ನಿರ್ವಹಿಸಲಿದ್ದಾರೆ. ಅವರೊಂದಿಗೆ ಕೇಂದ್ರ ಸಚಿವರು, ರಾಜ್ಯ ಸಚಿವರು ಪಾಲ್ಗೊಳ್ಳಲಿದ್ದಾರೆ. ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT