ಈಚಿನ ವರ್ಷಗಳಲ್ಲಿ ಜಿಲ್ಲೆಯ ಅಂತರ್ಜಲ ಮಟ್ಟವು ಸುಧಾರಣೆ ಕಂಡಿದೆ. ನೀರಿನ ಬಳಕೆಯಲ್ಲಿ ಮೈಸೂರು ‘ಸುರಕ್ಷತಾ ವಲಯ’ದಲ್ಲಿ ಇದೆ
ಪ್ರಸನ್ನಕುಮಾರ್ ಹಿರಿಯ ಭೂವಿಜ್ಞಾನಿ ಜಿಲ್ಲಾ ಅಂತರ್ಜಲ ಕಚೇರಿ
ಅನುಮತಿ ಕಡ್ಡಾಯ
ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಮೇಲೆ ನಿಗಾ ವಹಿಸಲೆಂದೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಂತರ್ಜಲ ಪ್ರಾಧಿಕಾರ ಸಮಿತಿ ಇದೆ. ಜಿಲ್ಲೆಯಲ್ಲಿ ಕೊಳವೆಬಾವಿ ಕೊರೆಯಿಸುವುದಕ್ಕೆ ಮುನ್ನ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಬೋರ್‌ವೆಲ್ ಕೊರೆಯಿಸುವ 15 ದಿನ ಮುನ್ನವೇ ಇಲಾಖೆಗೆ ಮಾಹಿತಿ ನೀಡಬೇಕಾಗುತ್ತದೆ. ಅದರಲ್ಲಿಯೂ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆಗೆ ಬೋರ್‌ವೆಲ್‌ಗಳ ಬಳಕೆ ಬಗ್ಗೆ ಸರ್ಕಾರ ಈಚಿನ ದಿನಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದ್ದು ಸಕ್ಷಮ ಪ್ರಾಧಿಕಾರದಿಂದ ಎನ್‌ಒಸಿ ಪಡೆಯುವುದನ್ನು ಕಡ್ಡಾಯಗೊಳಿಸಿದೆ. ತಿಂಗಳುವಾರು ಎಷ್ಟು ನೀರನ್ನು ಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ನೀಡುವುದು ಕಡ್ಡಾಯವಾಗಿದೆ.
ಅನುಮತಿ ಹೇಗೆ?
ಕೃಷಿ ಕುಡಿಯುವ ನೀರು ವಾಣಿಜ್ಯ ಉದ್ದೇಶಗಳಿಗೆ ಕೊಳವೆಬಾವಿ ಕೊರೆಯಿಸುವವರು ಮೊದಲು ತಾವು ಬೋರ್‌ವೆಲ್ ಕೊರೆಯಿಸುವ ಸ್ಥಳಕ್ಕೆ ಸಮೀಪದಲ್ಲಿ ‘ಸಾರ್ವಜನಿಕ ಕುಡಿಯುವ ನೀರಿನ ಮೂಲಗಳು ಇಲ್ಲ’ ಎಂದು ತಮ್ಮ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಂದ ದೃಢೀಕರಣ ಪತ್ರ ಪಡೆಯಬೇಕಾಗುತ್ತದೆ. ನಂತರದಲ್ಲಿ ಇಲಾಖೆಯ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ.