ನಂಜನಗೂಡು: ‘ಪ್ರಧಾನಿ ನರೇಂದ್ರಮೋದಿ ಅವರು ಜಿಎಸ್ಟಿ ಸುಧಾರಣೆ ಮಾಡಿದ್ದರಿಂದಾಗಿ ದೇಶದಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಬಡವರು, ಮಧ್ಯಮ ವರ್ಗದ ರೈತರಿಗೆ ಅನುಕೂಲವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ನಗರದ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ 45 ಜೊತೆ ಕಾಟ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

‘ನರೇಂದ್ರ ಮೋದಿರವರು 11 ವರ್ಷಗಳಿಂದ ಒಂದು ದಿನವೂ ವಿಶ್ರಾಂತಿ ಪಡೆಯದೆ ದೇಶವನ್ನು ಸರ್ವಾಂಗೀಣ ಅಭಿವೃದ್ಧಿಗೊಳಿಸಿ ವಿಕಸಿತ ಭಾರತವನ್ನಾಗಿ ರೂಪಿಸಿ ಜಗತ್ತಿನ ಅಭಿವೃದ್ಧಿಶೀಲ ರಾಷ್ಟ್ರ, ಮತ್ತು ವಿಶ್ವಗುರುವನಾಗಿ ರೂಪಿಸಲು ಶ್ರಮಿಸುತ್ತಿದ್ದಾರೆ. ಇಂತಹ ದೂರ ದೃಷ್ಟಿಯುಳ್ಳ ಜನಸೇವಕ ದೇಶದ ಪ್ರಧಾನಿಯಾಗಿರುವುದು ನಮ್ಮೆಲ್ಲರ ಅದೃಷ್ಟ, ದೇಶದ ಜನ ಸೇವಕ ಎಂದು ಹೇಳಿರುವುದು ಅವರ ದೂರದೃಷ್ಟಿತ್ವ ಚಿಂತನೆಗೆ ಸಾಕ್ಷಿಯಾಗಿದೆ’ ಎಂದರು.

‘ಕುಸ್ತಿಗೆ ತನ್ನದೇ ಆದ ಇತಿಹಾಸವಿದ್ದು, ಜನಪ್ರಿಯ ಕ್ರೀಡೆ ಎನಿಸಿದೆ, ಕುಸ್ತಿ ಕಲೆಯನ್ನು ಉಳಿಸಿ ಬೆಳೆಸಬೇಕಾದದ್ದು ಯುವಕರ ಕರ್ತವ್ಯವಾಗಿದೆ. ನರೇಂದ್ರ ಮೋದಿ ಅಭಿಮಾನಿ ಬಳಗ ಟೂರ್ನಿಯನ್ನು ಆಯೋಜಿಸಿ ಸ್ಥಳೀಯ ಕುಸ್ತಿಪಟುಗಳಿಗೆ ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆಯಾಗಿದೆ’ ಎಂದರು.

ಮಾಜಿ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ‘ನಂಜನಗೂಡು ಕುಸ್ತಿ ಕಲೆಗೆ ಬಹಳ ಹೆಸರುವಾಸಿಯಾಗಿದ್ದು, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಮಹದೇವ ಪ್ರಸಾದ್ ಮತ್ತು ಸ್ನೇಹಿತರು ಟೂರ್ನಿಯನ್ನು ಆಯೋಜಿಸಿ ಕುಸ್ತಿಪಟುಗಳಿಗೆ ಅವಕಾಶ ಕಲ್ಪಿಸುವ ಮೂಲಕ ಕುಸ್ತಿಗೆ ಉತ್ತೇಜನ ನೀಡಿದ್ದಾರೆ. ಬಿ.ವೈ.ವಿಜಯೇಂದ್ರ ಅವರು ಪಕ್ಷ ಸಂಘಟಿಸುವ ಹೊಣೆ ಹೊತ್ತು ಯಶಸ್ವಿಯಾಗಿ ಪಕ್ಷ ಸಂಘಟನೆ ಮಾಡಿದ್ದಾರೆ, ಮುಂದಿನ ಬಾರಿಯೂ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಮುಂದುವರೆಯಲಿ’ ಎಂದು ಭವಿಷ್ಯ ನುಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ, ಶಾಸಕ ಶ್ರೀವತ್ಸ, ಮಾಜಿ ಶಾಸಕ ನಾಗೇಂದ್ರ, ಮುಖಂಡರಾದ ರಘುಕೌಟಿಲ್ಯ, ಸದಾನಂದ, ಎಲ್.ಆರ್. ಮಹಾದೇವಸ್ವಾಮಿ, ರಾಜೇಂದ್ರ, ಚಿತ್ರನಟ ಹೇಮಂತ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆಂಡಗಣ್ಣಪ್ಪ, ನಗರಾಧ್ಯಕ್ಷ ಸಿದ್ದರಾಜು, ಪ್ರಧಾನ ಕಾರ್ಯದರ್ಶಿ ಮಹದೇವ ಪ್ರಸಾದ್, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಎಸ್ಎಂ. ಕೆಂಪಣ್ಣ, ಎನ್. ಸಿ.ಬಸವಣ್ಣ, ಬಾಲಚಂದ್ರ, ಹೆಮ್ಮರಗಾಲ ಸೋಮಣ್ಣ, ಶಿವಣ್ಣ, ವಳಗೆರೆ ಪುಟ್ಟಸ್ವಾಮಿ, ಮಹೇಶ್ ಬಾಬು, ಅನಂತ್, ಸಿದ್ದರಾಜು, ಅರುಣ್ ಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.