ಎಚ್.ಡಿ. ಕೋಟೆ: ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ರಾಜ್ಯಕ್ಕೆ ಬೇಡ’ ಎಂದು ಒತ್ತಾಯಿಸಿ ತಾಲ್ಲೂಕಿನ ಪ್ರಜಾಸೌಧದಲ್ಲಿ ಸಂವಿಧಾನ ಸಂರಕ್ಷಣೆ ಪಡೆ, ರೈತ ಸಂಘ, ಪ್ರಗತಿಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಬಳಿಕ ತಹಶೀಲ್ದಾರ್ ಮೂಲಕ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.

ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, ‘ತಾಲೂಕಿನಲ್ಲಿ ಗಿರಿಜನರು, ದಲಿತರು ಹೆಚ್ಚಾಗಿ ವಾಸಿಸುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಮತದಾನದ ಹಕ್ಕನ್ನು ಕಳೆದುಕೊಳ್ಳುವರು. ಇದರಿಂದ ಮುಂದಿನ ದಿನಗಳಲ್ಲಿ ಪಡಿತರ ಚೀಟಿ ಮುಂತಾದ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುವವರು. ಪ್ರಜಾಪ್ರಭುತ್ವಕ್ಕೆ ಮಾರಕವಾದ ಹಾಗೂ ಪ್ರಜಾತಂತ್ರಕ್ಕೆ ತೊಂದರೆಯಾದ ಈ ಎಸ್ಐಆರ್ ನಿಲ್ಲಿಸಿ ಮತದಾರರ ಹಿತ ಕಾಪಾಡಬೇಕು’ ಎಂದು ಒತ್ತಾಯಿಸಿದರು.

ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾದಪ್ಪ ಮಾತನಾಡಿ, ‘ಎಲ್ಲಾ ರಾಜ್ಯಗಳಲ್ಲಿ ಹೆಚ್ಚಿನ ಮತದಾರರನ್ನು ಕೈ ಬಿಡಲಾಗಿದೆ. ಈ ಪ್ರಕ್ರಿಯೆಯಿಂದ ಕೋಮುವಾದವು ಹೆಚ್ಚಾಗುತ್ತದೆ. ಆದ್ದರಿಂದ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು’ ಎಂದರು

ಪ್ರಗತಿಪರ ಮುಖಂಡ ಅಕ್ಬರ್ ಪಾಷ ಮಾತನಾಡಿ, ‘ಎಸ್ಐಆರ ಎಂಬುದು ಸಂವಿಧಾನ ವಿರೋಧಿ ಪ್ರಜಾತಂತ್ರಕ್ಕೆ ಮಾರಕ. ಪ್ರತಿಯೊಬ್ಬ ಪ್ರಜೆಯನ್ನು ಅಪರಾಧಿಯ ಸ್ಥಾನದಲ್ಲಿ ನಿಲ್ಲಿಸುವ ಪ್ರಕ್ರಿಯೆಯಾಗಿದೆ. ಇದು ದೇಶದಲ್ಲಿ ಮತದಾನದ ಹಕ್ಕಿಲ್ಲದ ಎರಡನೇ ದರ್ಜೆಯ ಪ್ರಜೆಗಳನ್ನು ಸೃಷ್ಟಿಸುವ ಪ್ರಕ್ರಿಯೆಯಾಗಿದೆ’ ಎಂದು ದೂರಿದರು.

‘ಎಸ್ಐಆರ್ ಜಾರಿಗೆ ಬಂದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿಯು ತನ್ನ ನನ್ನ ಪಕ್ಷವು ಅಧಿಕಾರಕ್ಕೆ ಬರಲು ಬೇಕಾದ ಪ್ರಯತ್ನ ಮಾಡುತ್ತಿದೆ. ಈ ಕಾರಣ ರಾಜ್ಯ ಸರ್ಕಾರವು ರಾಜ್ಯದ ಜನತೆ, ದೇಶದ ಸಂವಿಧಾನ ರಕ್ಷಿಸಲು ಒಪ್ಪಿಕೊಳ್ಳಬಾರದು’ ಎಂದು ಒತ್ತಾಯಿಸಿದರು.

‘ಈ ಪ್ರಕ್ರಿಯೆಯನ್ನು ಕನಿಷ್ಠ ಒಂದು ವರ್ಷಗಳ ಅವಧಿ ನಿಗದಿ ಮಾಡಬೇಕು. ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಬೇಕು. ನ್ಯೂನತೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಿ ಅಂತಿಮ ಪಟ್ಟಿ ತಯಾರಿಸಲು ಆರು ತಿಂಗಳ ಸಮಯ ಇರಬೇಕು. ಮತದಾರರು ತಮ್ಮ ಹಕ್ಕನ್ನು ಕಳೆದುಕೊಳ್ಳಲು ರಾಜ್ಯ ಸರ್ಕಾರ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು

ಏಜಾಜ್ ಪಾಷಾ, ಮುದ್ದು ಮಲ್ಲಯ್ಯ, ಶಿವರಾಜು, ಮಾದಪ್ಪ ಮನುಗನಹಳ್ಳಿ, ಚಾಮರಾಜು, ಉಮೇಶ್, ಅಕ್ಬರ್ ಪಾಷಾ, ಸ್ಟುಡಿಯೋ ಪ್ರಕಾಶ್, ಕ್ರಾಂತಿ ಕುಮಾರ್, ಪುಟ್ಟ ಮಾಧು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-38-2139883333

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.