ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮುಂಡಿ ಬೆಟ್ಟದಲ್ಲಿ ಎಚ್.ಡಿ. ರೇವಣ್ಣ ಪೂಜೆ

Published 14 ಮೇ 2024, 16:02 IST
Last Updated 14 ಮೇ 2024, 16:02 IST
ಅಕ್ಷರ ಗಾತ್ರ

ಮೈಸೂರು: ಹೊಳೆ ನರಸೀಪುರ ಶಾಸಕ ಎಚ್‌.ಡಿ. ರೇವಣ್ಣ ಮಂಗಳವಾರ ಜೈಲಿನಿಂದ ಹೊರಬಂದ ಬೆನ್ನಲ್ಲೇ ಇಲ್ಲಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು.

ಗರ್ಭಗುಡಿಯಲ್ಲಿ ಸುಮಾರು 20 ನಿಮಿಷ ಕಾಲ ನಿಂತ ರೇವಣ್ಣ, ಎಚ್‌.ಡಿ. ದೇವೇಗೌಡರ ಕುಟುಂಬದ ಎಲ್ಲರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ಬಳಿಕ ಬಲಗೈಗೆ ರಕ್ಷಾ ಸೂತ್ರ ಕಟ್ಟಿಸಿಕೊಂಡರು. ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಜೆಡಿಎಸ್ ಮುಖಂಡರಾದ ಸಾ.ರಾ. ಮಹೇಶ್‌, ಸಿ.ಎಸ್‌. ಪುಟ್ಟರಾಜು, ರವಿಕುಮಾರ್‌, ಬಿಜೆಪಿ ಮುಖಂಡ ಸಂದೇಶ್‌ ಸ್ವಾಮಿ ಜೊತೆಗಿದ್ದರು.

ಈ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ ‘ 40 ವರ್ಷದ ನನ್ನ ರಾಜಕೀಯ ಇತಿಹಾಸದಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ನನಗೆ ದೇವರು ಹಾಗೂ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಹೆಚ್ಚೇನು ಹೇಳಲಾರೆ. ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದರೆ ಅದನ್ನು ತಾಯಿಯ ಸನ್ನಿಧಿಗೆ ಬಿಟ್ಟಿದ್ದೇನೆ’ ಎಂದಷ್ಟೇ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT