ಮೈಸೂರು: ‘ಬಿಜೆಪಿಯಲ್ಲಿ ಸಿದ್ದರಾಮಯ್ಯ ಮೋರ್ಚಾ ಆರಂಭವಾಗಿದೆ. ಬಸನಗೌಡ ಪಾಟೀಲ ಯತ್ನಾಳ, ಪ್ರತಾಪ ಸಿಂಹ, ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿಯ ಪರವಾಗಿ ಮಾತನಾಡುತ್ತಿದ್ದು, ಒಂದು ಪಕ್ಷದ ನಾಯಕರೆಂದು ಕರೆದುಕೊಳ್ಳುವ ಅವರಿಗೆ ನಾಚಿಕೆಯಾಗಬೇಕು’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು.
‘ಮುಡಾ ನಿವೇಶನ ಹಂಚಿಕೆ ಪ್ರಕರಣದಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ನಡೆಯುತ್ತಿದೆ. ಅದಕ್ಕಾಗಿ ಮಹಿಷ ದಸರಾ ಕುರಿತು ಮಾತನಾಡು ತ್ತಿದ್ದಾರೆ’ ಎಂದು ಸೋಮವಾರ ಇಲ್ಲಿ ದೂರಿದರು.