ಹಂಪಾಪುರ: ಬಡವರು, ಅಸಹಾಯಕರಿಗೆ ವಾತ್ಸಲ್ಯ ಯೋಜನೆಯಡಿ ಮನೆ ಮತ್ತು ಮಾಸಾಶನ ನೀಡುವ ಮೂಲಕ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹಲವು ಕುಟುಂಬಗಳಿಗೆ ನೆರವಾಗುತ್ತಿದ್ದಾರೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಜಯಕುಮಾರ ನಾಗನಾಳ ತಿಳಿಸಿದರು.

ಸಮೀಪದ ಹೊಸಹೊಳಲು ಗ್ರಾಮದಲ್ಲಿ ವಾತ್ಸಲ್ಯ ಯೋಜನೆಯಲ್ಲಿ ನಿರ್ಮಿಸಿರುವ ಮನೆಯನ್ನು ಈಚೆಗೆ ಫಲಾನುಭವಿಗಳಾದ ರತ್ನಮ್ಮ, ಪುಟ್ಟಯ್ಯ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.

‘ಎಚ್.ಡಿ. ಕೋಟೆ ತಾಲ್ಲೂಕಿನಲ್ಲಿ 136 ಜನರಿಗೆ ಮಾಸಾಶನ ನೀಡಲಾಗುತ್ತಿದೆ. ಅದೇ ರೀತಿ ಅಸಹಾಯಕ ಕುಟುಂಬಗಳಿಗೆ ವಾತ್ಸಲ್ಯ ಯೋಜನೆಯಲ್ಲಿ ರಾಜ್ಯದಲ್ಲಿ 1100ಕ್ಕೂ ಹೆಚ್ಚು ಮನೆಗಳು ಹಾಗೂ ತಾಲ್ಲೂಕಿನಲ್ಲಿ 8 ಮನೆಗಳನ್ನು ಕಟ್ಟಿಸಿಕೊಡಲಾಗಿದೆ’ ಎಂದು ತಿಳಿಸಿದರು.

ಹೇಮಾವತಿ ವಿ. ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ ಮಾಸಾಶನ ಫಲಾನುಭವಿಗಳ ಮನೆಗಳಿಗೆ ಹಣ್ಣು ವಿತರಿಸಲಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದರು.

ತಾಲ್ಲೂಕಿನ ಅಂತರಸಂತೆ ವಲಯದ ಮಹಿಳೆಯರು ಯೋಜನೆಯಡಿ ಪಡೆದಸಾಲವನ್ನು ಸಮರ್ಪಕವಾಗಿ ಬಳಸಿಕೊಂಡು, ಮರುಪಾವತಿ ಮಾಡುವಲ್ಲಿ ಮುಂದಾಗಿದ್ದಾರೆ ಎಂದು ಹೇಳಿದರು.

ಒಕ್ಕೂಟದ ಅಧ್ಯಕ್ಷ ಟಿ. ಮಂಜು, ‘ಧರ್ಮಸ್ಥಳ ಸಂಸ್ಥೆಯಿಂದ ಜನಪರ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಗ್ರಾಮದಲ್ಲಿ ನಮ್ಮ ಊರು ನಮ್ಮ ಕೆರೆ ಯೋಜನೆಯಲ್ಲಿ ಕೆರೆ ಹೂಳು ತೆಗೆದು ಅಭಿವೃದ್ಧಿ ಮಾಡಿರುವುದರಿಂದ ರೈತರಿಗೆ ಅನುಕೂಲವಾಗಿದೆ’ ಎಂದರು.

ಧರ್ಮಸ್ಥಳ ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ಭಾಸ್ಕರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕನ್ನಡ ಪ್ರಮೋದ, ಮುಖಂಡರಾದ ಬೈರೇಗೌಡ, ಶಿವಪ್ರಕಾಶ್, ಪದ್ಮರಾಜು, ಮಹದೇವು, ಅಂತರಸಂತೆ ವಲಯ ಮೇಲ್ವಿಚಾರಕಿ ಶಾಂತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-38-526956637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.