ಮೈಸೂರು: ‘ತಂದೆ, ಶಾಸಕ ಜಿ.ಟಿ. ದೇವೇಗೌಡ ಅವರಿಗೆ ಪಕ್ಷದ ವಿಚಾರದಲ್ಲಿ ಬೇಸರ ಇರುವುದು ಸತ್ಯ. ಅಸಮಾಧಾನದ ಕಾರಣದಿಂದಲೇ ಜೆಡಿಎಸ್ ಸಂಘಟನೆ, ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ’ ಎಂದು ಹುಣಸೂರು ಶಾಸಕ ಜಿ.ಡಿ. ಹರೀಶ್ಗೌಡ ತಿಳಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅವರ ಮನವೊಲಿಸುವ ಪ್ರಯತ್ನವನ್ನು ವರಿಷ್ಠರು ಮಾಡುತ್ತಿದ್ದಾರೆ. ಇದು ನನ್ನ ಮನೆಯ ವಿಚಾರವಲ್ಲ. ಆದ್ದರಿಂದ, ಆ ಬಗ್ಗೆ ಹೆಚ್ಚು ಮಾತನಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಬಗೆಹರಿಯುವ ವಿಶ್ವಾಸವಿದೆ’ ಎಂದರು.

‘ನಾನಂತು ಜೆಡಿಎಸ್ನಲ್ಲಿದ್ದೇನೆ, ಇರುತ್ತೇನೆ. ಕಾಂಗ್ರೆಸ್ಗೆ ಹೋಗುವ ಪ್ರಶ್ನೆಯೇ ಇಲ್ಲ. ಜನರು ನನ್ನನ್ನು ಜೆಡಿಎಸ್ನಿಂದ ಗೆಲ್ಲಿಸಿದ್ದು, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಅವರ ನಂಬಿಕೆಗೆ ನಾನು ದ್ರೋಹ ಮಾಡುವುದಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.