ಮೈಸೂರು: ‘ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಮತ್ತು ಹಲವು ಜನಪರ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದರ ಬಗ್ಗೆ ಬಿಜೆಪಿಯವರು ಆಕ್ಷೇಪ ವ್ಯಕ್ತಪಡಿಸಿರುವುದು ಅತ್ಯಂತ ಬೇಸರದ ಸಂಗತಿ’ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಬೂಕರ್ ಪ್ರಶಸ್ತಿಯ ಮೂಲಕ ಕನ್ನಡ ನಾಡಿನ ಕಂಪನ್ನು ವಿಶ್ವದೆಲ್ಲೆಡೆ ಹಬ್ಬುವ ಕೆಲಸ ಮಾಡಿರುವ ಬಾನು ಮುಷ್ತಾಕ್ ಅವರನ್ನು ಈ ನಾಡಿನ ಪ್ರಜೆಗಳಾಗಿ ಬಿಜೆಪಿಯವರು ಮುಕ್ತ ಮನಸ್ಸಿನಿಂದ ಒಪ್ಪಿಕೊಂಡು ಗೌರವಿಸಬೇಕಿತ್ತು. ಆದರೆ, ತಲೆಯಲ್ಲಿ ಮನುವಾದಿಗಳ ವಿಷ ತುಂಬಿಕೊಂಡಿರುವ ಅವರು ಮುಸ್ಲಿಮರ ಹೆಸರು ಕೇಳಿದರೆ ಕಾರಣವಿಲ್ಲದೆಯೇ ದ್ವೇಷಿಸುವ ಕೆಟ್ಟ ನೀತಿ ಮುಂದುವರಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ದಸರಾ ಎಂಬುದು ನಾಡಹಬ್ಬ ಎಂಬ ಸಂಗತಿಯನ್ನು ಮರೆತು, ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿರುವ ಬಿಜೆಪಿಯವರು, ನಾಡು– ನುಡಿಗೆ ಕೊಡುಗೆ ನೀಡಿದವರನ್ನು ಅವಮಾನಿಸುವ ಕೆಲಸವನ್ನು ಮೊದಲು ನಿಲ್ಲಿಸಲಿ. ಧರ್ಮವನ್ನು ರಾಜಕೀಯದಲ್ಲಿ ಬೆರೆಸಬಾರದೆಂಬ ಸಣ್ಣ ಅರಿವನ್ನು ಬಿಜೆಪಿಯೊಳಗೆ ಅಳಿದುಳಿದಿರುವ ಕೆಲ ವಿಚಾರವಂತರು ಪಕ್ಷದ ಮುಖಂಡರಿಗೆ ತಿಳಿಸಲಿ’ ಎಂದು ಹೇಳಿದ್ದಾರೆ.

‘ದೇಶದ ಜನರಾದ ನಾವು ಐಕ್ಯತೆಯಿಂದ ಇರಬೇಕೆಂಬ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ವರ್ತಿಸುತ್ತಿರುವ ಬಿಜೆಪಿಯವರು, ಮುಸ್ಲಿಂ ದ್ವೇಷದ ಮನಸ್ಥಿತಿಯನ್ನು ಬದಿಗಿಟ್ಟು ಸಂವಿಧಾನದ ಆಶಯವನ್ನು ಅರ್ಥ ಮಾಡಿಕೊಳ್ಳಲಿ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.