ಎಚ್ ಡಿ ಕೋಟೆ: ಅಂಗವಿಕಲರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಸರ್ಕಾರದ ಜನಪರ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯಲ್ಲಿ ತಾಲ್ಲೂಕು ಪಂಚಾಯತ್ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಂಗವಿಕಲರಿಗೆ ಸಾಧನ/ಸಲಕರಣೆ ವಿತರಣೆ ಮತ್ತು ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಮಂಡಳಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದರು.

‘ಸರ್ಕಾರದ ಯೋಜನೆಗಳನ್ನು ಯಾರು ಕೂಡ ದುರ್ಬಳಕೆ ಮಾಡಿಕೊಳ್ಳಬಾರದು. ಲ್ಯಾಪ್ಟಾಪ್ಗಳನ್ನೂ ಸಿಬ್ಬಂದಿ ಸರ್ಕಾರಿ ಕಚೇರಿಯಲ್ಲೇ ಬಳಸಿ, ಬಳಿಕ ಆಫೀಸ್ ನಲ್ಲೇ ಇಟ್ಟು ಹೋಗಬೇಕು. ಮನೆಗೆ ತೆಗೆದುಕೊಂಡು ಹೋಗಿ ತಮ್ಮ ಮಕ್ಕಳಿಗೆ, ಸಂಬಂಧಿಕರಿಗೆ ಕೊಡುವ ಕೆಲಸ ಮಾಡಬಾರದು.ಗಮನಕ್ಕೆ ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಶಾಸಕ ಅನಿಲ್ ಚಿಕ್ಕಮಾದು ಎಚ್ಚರಿಸಿದರು.

ಸಮುದಾಯ ಭವನ ಮತ್ತು ಸಭೆ ಸಮಾರಂಭ ನಡೆಸಲು ಸಭಾಂಗಣ ಬೇಕು ಎಂದು ಅಂಗವಿಕಲರ ಸಂಘಟನೆ ಮನವಿ ಪತ್ರ ನೀಡಿದ್ದಾರೆ. ತಾಲ್ಲೂಕು ಪಂಚಾಯತ್ ಕಚೇರಿ ಜಾಗದಲ್ಲೇ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಗುರುತಿಸಿ, ಶಾಸಕರ ಅನುದಾನದಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲಾಗುವುದು. ಸ್ಥಗಿತಗೊಂಡಿರುವ ಪಿಂಚಣಿಯನ್ನು ಮತ್ತೆ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಅವರು ಭರವಸೆ ನೀಡಿದರು.

ತಹಶೀಲ್ದಾರ್ ಶ್ರೀನಿವಾಸ್, ಇಒ ಧರಣೇಶ್, ಗಿರಿಜನ ಕಲ್ಯಾಣ ಅಧಿಕಾರಿ ಮಹೇಶ್, ದೇವರಾಜು ಅರಸು ನಿಗಮದ ಮಹದೇವ್, ರಾಘವೇಂದ್ರ , ವಿಶೇಷ ಚೇತನರ ಇಲಾಖೆ ತಾಲ್ಲೂಕು ಸಂಯೋಜಕ ಮಹದೇವಯ್ಯ, ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-38-767132946

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.