ಎಚ್.ಡಿ.ಕೋಟೆ: ಕಸಬಾ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬೆಳೆಗನಹಳ್ಳಿ ಶಿವರಾಜು, ಉಪಾಧ್ಯಕ್ಷರಾಗಿ ಶುಭ ಮಂಗಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಟ್ಟಣದ ಕಸಬಾ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಗುರುವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಒಟ್ಟು 12 ನಿರ್ದೇಶಕರ ಸ್ಥಾನದಲ್ಲಿ, ಕಾಂಗ್ರೆಸ್ನ ಇಬ್ಬರು ನಿರ್ದೇಶಕರು ನಾಮಪತ್ರ ಸಲ್ಲಿಸದೆ ಚುನಾವಣೆಗೆ ಗೈರಾಗಿದ್ದರು. ಜೆಡಿಎಸ್ ಬೆಂಬಲಿತ ಉಳಿದ ಹತ್ತು ಮಂದಿಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷರ ಸ್ಥಾನಕ್ಕೆ ಶಿವರಾಜು, ಉಪಾಧ್ಯಕ್ಷರ ಸ್ಥಾನಕ್ಕೆ ಶುಭಮಂಗಳ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ರೇಣುಕಾ ರವರು ಘೋಷಣೆ ಮಾಡಿದ್ದಾರೆ.

ಶಿವರಾಜ್ ಮಾತನಾಡಿ, ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಇನ್ನು ಕೆಲ ಪ್ರಮುಖ ಪ್ರಭಾವಿಗಳು ನನ್ನನ್ನ ಅಧ್ಯಕ್ಷರನ್ನಾಗಿ ಮಾಡಬಾರದೆಂದು, ಸಾಕಷ್ಟು ಗೊಂದಲಗಳನ್ನ ಸೃಷ್ಟಿ ಮಾಡಿದ್ದರು. ಆದರೂ ನಮ್ಮ ನಿರ್ದೇಶಕರುಗಳು ಒಟ್ಟುಗೂಡಿ ನನ್ನನ್ನು ಅಧ್ಯಕ್ಷನನ್ನಾಗಿ ಮಾಡಲು ಸಂಪೂರ್ಣ ಬೆಂಬಲ ನೀಡಿದರು, ಮುಂದಿನ ದಿನಗಳಲ್ಲಿ ಬ್ಯಾಂಕಿನ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುತ್ತೇನೆ ಎಂದರು.

ಜೆಡಿಎಸ್ ಪಕ್ಷದ ಕಾರ್ಯಕರ್ತರುಗಳು ಮುಖಂಡರುಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿ ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.