ಎಚ್.ಡಿ. ಕೋಟೆ: ತಾಲ್ಲೂಕಿನ ತಾರಕ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಯೊಂದು ಓಡಾಡಿರುವುದು ರೈತರು ಮೊಬೈಲ್ ಫೋನ್ಗಳಲ್ಲಿ ಸೆರೆಹಿಡಿದಿದ್ದಾರೆ.

ತಾರಕ ಗ್ರಾಮಕ್ಕೆ ಸಮೀಪವೇ ಆನೆ ಓಡಾಡಿದೆ. ತಾರಕಾ ಜಲಾಶಯದ ಹಿನ್ನೀರು ನಾಗರಹೊಳೆ ಅಭಯಾರಣ್ಯಕ್ಕೆ ಸೇರಿದ್ದು, ಕಾಡಂಚಿನ ಭಾಗದಲ್ಲಿ ಹತ್ತಾರು ಹಳ್ಳಿಗಳಿವೆ. ಮಳೆಯಾಗಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ಬಿತ್ತನೆಗಾಗಿ ತೆರಳಿದ್ದ ಸಂದರ್ಭದಲ್ಲಿ ಆನೆ ಓಡಾಡಿರುವುದು ಕಂಡುಬಂದಿದೆ. ರೈತರು ತೀವ್ರ ಆತಂಕಗೊಂಡಿದ್ದಾರೆ.

‘ಕಾಡಂಚಿನ ಪ್ರದೇಶವಾಗಿರುವುದರಿಂದ ಕಾಡುಪ್ರಾಣಿಗಳು ಆಗಾಗ್ಗೆ ಕಾಣಿಸಿಕೊಳ್ಳುತ್ತವೆ. ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಮೀನಿಗೆ ತೆರಳುವಾಗ ಎಚ್ಚರಿರ ವಹಿಸುವಂತೆ ಅರಣ್ಯ ಇಲಾಖೆಯ ಸಿಬ್ಬಂದಿ ರೈತರಿಗೆ ಸೂಚಿಸಿದ್ದಾರೆ.

ಬೊಂಬಲಾಪುರ, ಬೂದನೂರು, ಮೇಟಿಕುಪ್ಪೆ, ಚಕೋಡನಹಳ್ಳಿ, ಭೀಮನಹಳ್ಳಿ ಭಾಗದ ಗ್ರಾಮಗಳಲ್ಲಿ ಕಾಡಂಚಿನ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳು ನಡೆಯುತ್ತಿದ್ದು, ಆನೆಗಳ ಹಾವಳಿ ಕಡಿಮೆಯಾಗಲಿದೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-38-354354406

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.