ಮೈಸೂರು: ‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಾವು ಪ್ರತಿನಿಧಿಸುವ ಮಂಡ್ಯಕ್ಕೆ ₹ 25ಸಾವಿರ ಕೋಟಿ ಅನುದಾನ ಕೊಡಿಸಲಿ’ ಎಂದು ಸವಾಲು ಹಾಕಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ‘ನಮ್ಮ ಜಿಲ್ಲೆಗೆ ಯಾವುದಾದರೂ ಪ್ರಮುಖ ಯೋಜನೆಯನ್ನು ಅವರು ತಂದರೆ ಅಭಿನಂದಿಸುತ್ತೇನೆ’ ಎಂದು ಹೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸಚಿವರಾಗಿ ಮಂಡ್ಯ ಆಟೊರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ₹ 30 ಲಕ್ಷ ಅನುದಾನ ಕೊಟ್ಟಿದ್ದಾರೆ. ಸಂಸದರಿಗೆ ₹ 5 ಕೋಟಿ ಅನುದಾನ ಬರುತ್ತದೆ, ಅದರಲ್ಲಿ ನೀಡಿದ್ದಾರೆ. ಈ ಕೆಲಸವನ್ನು ಹಿಂದಿನ ಸಂಸದೆ ಸುಮಲತಾ ಕೂಡ ಮಾಡಿದ್ದರು. ಎಲ್ಲರೂ ಕೊಡುತ್ತಾರೆ’ ಎಂದರು.

‘ನಮಗೂ, ಅವರಿಗೂ, ಶಾಸಕ, ಸಂಸದರಿಗೂ ನಿಧಿ ಬರುತ್ತದೆ. ಅದನ್ನು ಎಲ್ಲರೂ ಖರ್ಚು ಮಾಡುತ್ತಾರೆ. ಆದರೆ, ಕುಮಾರಸ್ವಾಮಿ ದೊಡ್ಡ ಮಂತ್ರಿ ಆಗಿದ್ದಾರೆ. ರಾಜ್ಯಕ್ಕೆ ಬರಬೇಕಾದ ತೆರಿಗೆ ಬಾಕಿಯನ್ನು ಕೊಡಿಸಲಿ. ಅದನ್ನು ಬಿಟ್ಟು ಸಹಜವಾಗಿಯೇ ಬರುವ ಬರುವ ಲೋಕಸಭಾ ಸದಸ್ಯರ ನಿಧಿ ತರುವುದರಲ್ಲೇನು ವಿಶೇಷವಿದೆ?’ ಎಂದು ಟೀಕಿಸಿದರು. ‘ಅವರು ವಿಶೇಷ ಅನುದಾನ ತಂದು ಜಿಲ್ಲೆಯನ್ನು ಅಭಿವೃದ್ಧಿಪಡಿಸಲಿ. ಇನ್ನೂ ಸಮಯ ಇದೆ. ಈ ನಿಟ್ಟಿನಲ್ಲಿ ಅವರು ಕೆಲಸ ಮಾಡಲಿ’ ಎಂದು ತಿಳಿಸಿದರು.

ಮಂಡ್ಯದಲ್ಲಿ ಸಚಿವ ಕುಮಾರಸ್ವಾಮಿ ದಿಶಾ ಸಭೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅವರಿಗೆ ಒಳ್ಳೆಯದಾಗಲಿ. ನಾನು ಸಭೆ ಕರೆದಾಗ ಅವರು ಬಂದಿಲ್ಲ. ನನಗೆ ಮೈಸೂರಿನಲ್ಲಿ ಅಧಿಕಾರಿಗಳ ಸಭೆ ಇದ್ದ ಕಾರಣ, ದಿಶಾ ಸಭೆಗೆ ಹೋಗಲಿಲ್ಲ’ ಎಂದರು.

‘ನಮ್ಮ ಸರ್ಕಾರ ಬಂದು ಎರಡು ವರ್ಷ ಆಗಿದೆ. ಜನಪರವಾಗಿ ಕೆಲಸ ಮಾಡುತ್ತಿದೆ. ಹೆಚ್ಚಿನ ಕೆಲಸ ಮಾಡುವ ನಿಟ್ಟಿನಲ್ಲಿ ಜನರ ಅಭಿಪ್ರಾಯ ಹೇಗಿದೆ ಎಂದು ಕೇಳಲೆಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಬಂದಿದ್ದರು. ಜೊತೆಗೆ ಶಾಸಕರ ಅಭಿಪ್ರಾಯವನ್ನೂ ಕೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ–ಡಿಸಿಎಂ ಡಿ.ಕೆ. ಶಿವಕುಮಾರ್ ಒಗ್ಗಟ್ಟಾಗಿದ್ದಾರೆ. ಯಾರು ಏನೇ ಮಾಡಿದರೂ ಅವರ ಒಗ್ಗಟ್ಟು ಹೀಗೆಯೇ ಇರುತ್ತದೆ’ ಎಂದು ಹೇಳಿದರು.

‘ಸಿದ್ದರಾಮಯ್ಯ ಅವರೇ ಮುಂದುವರಿಯಬೇಕಾ, ಬೇಡವಾ, ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ನಿರ್ಧರಿಸುವುದು ಹೈಕಮಾಂಡೇ ಹೊರತು ಹೇಳಿಕೆ ನೀಡುವವರಲ್ಲ’ ಎಂದು ಪ್ರತಿಕ್ರಿಯಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.