ಕೆ.ಆರ್. ನಗರ (ಮೈಸೂರು ಜಿಲ್ಲೆ): ‘ಕೇಂದ್ರ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅಧಿಕಾರಿಗಳು ಅತ್ಯಂತ ದಕ್ಷತೆ ಮತ್ತು ಕ್ಷಮತೆಯಿಂದ ಕೆಲಸ ಮಾಡಬೇಕು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್. ನಗರದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಆಶ್ರಯದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ತ್ರಿಚಕ್ರವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.

‘ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಂಗವಿಕಲರಿಗೆ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ಅಂಗವಿಕಲರಿಗೆ ಅನುಕಂಪ ಅಗತ್ಯವಿಲ್ಲ. ಅವರನ್ನು ಸಬಲೀಕರಣ ಮಾಡುವ ಅಗತ್ಯ ಬಹಳಷ್ಟಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಈ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ಫಲಾನುಭವಿಗೂ ಮುಟ್ಟಿಸಬೇಕಾದ ಕರ್ತವ್ಯ ಅಧಿಕಾರಿಗಳದ್ದು’ ಎಂದರು.

‘ಈಗಾಗಲೇ ಮಂಡ್ಯದಲ್ಲಿ ಅನೇಕ ಅಂಗವಿಕಲರಿಗೆ ಸೌಲಭ್ಯಗಳನ್ನು ವಿತರಿಸಲಾಗಿದೆ. ಸುಮಾರು ₹ 60 ಲಕ್ಷ ವೆಚ್ಚದಲ್ಲಿ 40 ಫಲಾನುಭವಿಗಳಿಗೆ ಬ್ಯಾಟರಿಚಾಲಿತ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ. ಹಾಗೆಯೇ ವಿವಿಧ ಸಿಎಸ್ಆರ್ ನಿಧಿಯ ನೆರವಿನಿಂದ 365 ಹೆಚ್ಚು ಅಂಗವಿಕಲರಿಗೆ ಬ್ಯಾಟರಿಚಾಲಿತ ತ್ರಿಚಕ್ರವಾಹನಗಳನ್ನು ನೀಡಲಾಗಿದೆ’ ಎಂದು ತಿಳಿಸಿದರು.

‘ಕೆ.ಆರ್. ನಗರವೂ ಒಳಗೊಂಡಂತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಪರ ಕೆಲಸಗಳನ್ನು ತೆಗೆದುಕೊಳ್ಳಲಾಗಿದೆ. ಸಿಎಸ್ಆರ್ ನಿಧಿ ಅನುದಾನ ಅಡಿಯಲ್ಲಿ ಅನೇಕ ಶಾಲೆಗಳಿಗೆ ನೂತನ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಬಗೆಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ’ ಎಂದರು.

ಕಾರ್ಯಕ್ರಮವನ್ನು ಕೃತಕ ಅಂಗಾಂಗ ತಯಾರಿಕಾ ಕಾರ್ಪೊರೇಷನ್ ಆಫ್ ಇಂಡಿಯಾ (ಅಲಿಂಕೋ) ಏರ್ಪಡಿಸಿತ್ತು.

ಮಾಜಿ ಸಚಿವ ಸಾ.ರಾ. ಮಹೇಶ್, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಕೆ. ವಿವೇಕಾನಂದ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.