ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೋಕ್ಸೊ ಪ್ರಕರಣ: ಮುಖ್ಯ ಶಿಕ್ಷಕ ನಾಗಣ್ಣ ಅಮಾನತು

Published 19 ಡಿಸೆಂಬರ್ 2023, 15:42 IST
Last Updated 19 ಡಿಸೆಂಬರ್ 2023, 15:42 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ವಿದ್ಯಾರ್ಥಿಗಳನ್ನು ಶಾಲಾ ಪ್ರವಾಸಕ್ಕೆ ಕರೆದೊಯ್ದ ಸಂದರ್ಭದಲ್ಲಿ ಹೆಣ್ಣು ಮಕ್ಕಳೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿ, ತಾಲ್ಲೂಕಿನ ಬೀಚನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಾಗಣ್ಣ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಆದೇಶಿಸಿದ್ದಾರೆ.

ಅನುಚಿತ ವರ್ತನೆ ಹಿನ್ನೆಲೆಯಲ್ಲಿ ನಾಗಣ್ಣ ವಿರುದ್ಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಅವರ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT