ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್.ಡಿ.ಕೋಟೆ | ಧಾರಾಕಾರ ಮಳೆ; ಉರುಳಿದ ಮರಗಳು

Published 12 ಮೇ 2023, 9:59 IST
Last Updated 12 ಮೇ 2023, 9:59 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ಪಟ್ಟಣದಲ್ಲಿ ಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ಹಾಗೂ ಬಾರಿ ಗಾತ್ರದ ಮರಗಳು ನೆಲಕ್ಕುರುಳಿವೆ.

ತಾಲ್ಲೂಕಿನ ಭೀಮನಹಳ್ಳಿ, ಮುಷ್ಕೆರೆ, ರಾಜೇಗೌಡನಹುಂಡಿ, ಕೈಲಾಸಪುರ, ಪಡುವಕೋಟೆ, ನಂಜನಾಯಕನಹಳ್ಳಿ, ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಗುರುವಾರ ಸುರಿದ ಬಾರಿ ಗಾಳಿ ಮಳೆಗೆ ವಿದ್ಯುತ್‌ ಕಂಬಗಳು ಹಾಗೂ ಎಲ್‌ಟಿ ಕಂಬಗಳು ಮುರಿದು ಬಿದ್ದಿದ್ದು, ಪ್ರಮುಖ ಮುಖ್ಯ ರಸ್ತೆಗಳಲ್ಲಿ ಬಾರಿ ಗಾತ್ರದ ಮರಗಳು ಉರುಳಿ ಬಿದ್ದಿದೆ.

ಅಂತರಸಂತೆ ಗ್ರಾಮದ ನಿವಾಸಿ ಸುಬ್ರಹ್ಮಣ್ಯ ಜಮೀನಿನಲ್ಲಿ ಇರುವ ಮನೆಯ ಮೇಲ್ಛಾವಣಿ ಗಾಳಿ ರಭಸಕ್ಕೆ ಹಾರಿ ಹೋಗಿದೆ. ಮನೆಯಲ್ಲಿದ್ದ ದಿನಸಿ ಪದಾರ್ಥಗಳು, ಗೊಬ್ಬರಗಳು ಮಳೆ ನೀರಿಗೆ ಹಾನಿಯಾಗಿದೆ.

ಹಲವು ಗ್ರಾಮಗಳಲ್ಲಿ ತೆಂಗಿನ ಮರ ಧರೆಗೆ ಉರುಳಿವೆ. ರಾಜೇಗೌಡನಹುಂಡಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಬಾರಿ ಗಾತ್ರದ ಮರ ಉರುಳಿದ್ದು, ರಸ್ತೆ ಸಂಚಾರಕ್ಕೆ ಸ್ಥಗಿತಗೊಂಡಿತ್ತು. ವಿಚಾರ ತಿಳಿಯುತ್ತಿದ್ದಂತೆ ಚೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರಗಳನ್ನು ತೆರವುಗೊಳಿಸಿ ರಸ್ತೆ ಸಂಚಾರ ಅನುವು ಮಾಡಿಕೊಟ್ಟರು.

ಅಣ್ಣೂರು ಹಾಗೂ ಅಕ್ಕ ಪಕ್ಕದ ಗ್ರಾಮಗಳಿಗೆ ಸಂಪೂರ್ಣ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಮುಷ್ಕೆರೆ ಗ್ರಾಮದಲ್ಲಿ ತೆಂಗಿನ ಮರ ನೆಲಕ್ಕುರುಳಿರುವುದು
ಎಚ್.ಡಿ.ಕೋಟೆ ತಾಲ್ಲೂಕಿನ ಮುಷ್ಕೆರೆ ಗ್ರಾಮದಲ್ಲಿ ತೆಂಗಿನ ಮರ ನೆಲಕ್ಕುರುಳಿರುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT