ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಮುಂದುವರಿದ ಭಾರಿ ಮಳೆ

Last Updated 1 ಮೇ 2022, 8:37 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಭಾನುವಾರ ನಸುಕಿನವರೆಗೂ ಭಾರಿ ಮಳೆ ಸುರಿದಿದೆ. ಮಧ್ಯಾಹ್ನದ ವೇಳೆಗೆ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಬಿರುಸಿನ ಮಳೆ ಸುರಿಯುತ್ತಿದೆ.

ಮಳೆಯಿಂದ ನಗರದ ಚಾಮರಾಜಜೋಡಿ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಆಟೊ ಜಖಂಗೊಂಡಿದೆ. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಮೈಸೂರು ಕೆಆರ್ ಎಸ್ ರಸ್ತೆಯಲ್ಲಿ ಸುಮಾರು 20 ಕ್ಕೂ ಅಧಿಕ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿವೆ. ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮೇಲೂ ವಿದ್ಯುತ್ ಕಂಬ ಬಿದ್ದಿದೆ. ತಕ್ಷಣವೇ ವಿದ್ಯುತ್ ಕಡಿತಗೊಂಡಿದ್ದರಿಂದ ಯಾವುದೇ ಅನಾಹುತ ಸಂಭವಿಸಲಿಲ್ಲ.
ನಗರದಲ್ಲಿ ಸುಮಾರು ನೂರಕ್ಕೂ ಅಧಿಕ ಕಡೆ ಮರ, ಮರದ ಕೊಂಬೆಗಳು, ರೆಂಬೆಗಳು ಮುರಿದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT