ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ನೆರವಾಗಬೇಕು: ಶಿವರಾಜು

Published 19 ಜೂನ್ 2024, 13:55 IST
Last Updated 19 ಜೂನ್ 2024, 13:55 IST
ಅಕ್ಷರ ಗಾತ್ರ

ಮೈಸೂರು: ‘ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ನೆರವಾಗಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಸೂಚಿಸಿದರು.

ಇಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ‘ಕುಟುಂಬದವರಿಗೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದಂತೆ ಎಲ್ಲ 65 ಪ್ರಕರಣಗಳನ್ನೂ ಇತ್ಯರ್ಥಪಡಿಸಲಾಗಿದೆ’ ಎಂದರು.

‘ರೈತ ಆತ್ಮಹತ್ಯೆ ಪ್ರಕರಣ ಕಂಡು ಬಂದ 24 ಗಂಟೆಯ ಒಳಗೆ ಆಯಾ ತಹಶೀಲ್ದಾರ್ ಹಾಗೂ ಸಮಿತಿಯವರು ಆ ಸ್ಧಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ರೈತ ಕುಟುಂಬಕ್ಕೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು’ ಎಂದರು.

‘ಪತ್ನಿಗೆ ₹2 ಸಾವಿರ ಮಾಸಾಶನ, ಉಚಿತ ಶಿಕ್ಷಣ ಸೌಲಭ್ಯ, ಇಡೀ ಕುಟುಂಬಗಳಗೆ ವಿಶೇಷ ಆರೋಗ್ಯ ಯೋಜನೆ ಸೌಲಭ್ಯ ಲಭ್ಯವಾಗುವಂತೆ ಮಾಡಬೇಕು’ ಎಂದು ನಿರ್ದೇಶನ ನೀಡಿದರು.

ಎಎಸ್ಪಿ ನಂದಿನಿ, ಜಿಲ್ಲಾ ಸಹಕಾರ ನಿಬಂಧಕರು, ಜಿಲ್ಲಾ ವೈದ್ಯಾಧಿಕಾರಿ, ಜಿಲ್ಲಾ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT