ಬೆಟ್ಟದಪುರ: ದೇವಾಲಯ ನಿರ್ಮಾಣದಿಂದ ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಟ್ಟದಪುರ ಯೋಜನಾ ಕಚೇರಿ ವತಿಯಿಂದ ಸಮೀಪದ ಬೆಕ್ಕರೆ ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ದೇವಾಲಯ ನಿರ್ಮಾಣಕ್ಕೆ ಸಂಸ್ಥೆ ವತಿಯಿಂದ ಮಂಜೂರಾದ ₹1ಲಕ್ಷ ಮೊತ್ತದ ಡಿಡಿ ಹಸ್ತಾಂತರಿಸಿ ಅವರು ಮಾತನಾಡಿದರು.

ಸಂಸ್ಥೆ ವತಿಯಿಂದ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳಿಗೆ ಕೈಲಾದ ನೆರವು ನೀಡಲಾಗುತ್ತಿದೆ, ಪಿರಿಯಾಪಟ್ಟಣ ತಾಲ್ಲೂಕಿನಾದ್ಯಂತ ಹಲವು ದೇವಾಲಯಗಳ ಜೀರ್ಣೋದ್ಧಾರ ಸೇರಿದಂತೆ ಸಮುದಾಯ ಭವನ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮ ಅವರ ಸೂಚನೆ ಮೇರೆಗೆ ಆರ್ಥಿಕ ಧನ ಸಹಾಯ ನೀಡಲಾಗುತ್ತಿದೆ ಎಂದರು.

ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸ್ವ ಸಹಾಯ ಸಂಘ ಸದಸ್ಯರು, ವಲಯದ ಮೇಲ್ವಿಚಾರಕರಾದ ಹೇಮಂತ್, ಸೇವಾಪ್ರತಿನಿಧಿ ರೇಖಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.