ಮೈಸೂರು: ‘ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ತಿಳಿಸುವ ಸಲುವಾಗಿ ಮಹನೀಯರ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಅಂತೆಯೇ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ 20ರಂದು ಬೆಳಿಗ್ಗೆ 11.30ಕ್ಕೆ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಆಚರಿಸಲಾಗುವುದು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಗೀತ ಗಾಯನ ನಡೆಯಲಿದೆ. ಸಮುದಾಯದ ಮುಖಂಡರ ಸಲಹೆಯಂತೆ ಸಾನ್ನಿಧ್ಯ ವಹಿಸಲು ಸ್ವಾಮೀಜಿ ಹಾಗೂ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸಲಾಗುವುದು’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್ ಮಾತನಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.