ಹುಣಸೂರು: ‘ಮಹಿಳೆಯು ಕಾನೂನುಬದ್ಧ ಹಕ್ಕುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವುದರಿಂದ ಕುಟುಂಬದಲ್ಲಿ ಸಾಮರಸ್ಯತೆ ಕಾಯ್ದುಕೊಳ್ಳಲು ಸಾಧ್ಯ’ ಎಂದು ನ್ಯಾಯಾಧೀಶೆ ಅನಿತಾ ಹೇಳಿದರು.

ನಗರದ ಶಿಕ್ಷಣ ಇಲಾಖೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಕೀಲರ ಸಂಘ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಿಳೆಯರ ರಕ್ಷಣೆಗೆ ಸಂವಿಧಾನಾತ್ಮಕವಾಗಿ ಹಲವು ಹಕ್ಕುಗಳನ್ನು ಸರ್ಕಾರ ರೂಪಿಸಿ ಜಾರಿಗೊಳಿಸಿದೆ. ಆ ಹಕ್ಕುಗಳನ್ನು ನಾವು ನಮ್ಮ ವಿವೇಚನೆಯಿಂದ ಬಳಸಿಕೊಳ್ಳಬೇಕು. ಮಹಿಳೆಯರ ಆರ್ಥಿಕ ಪರಿಸ್ಥಿತಿಯೂ ಬಲಗೊಳ್ಳುತ್ತಿದೆ. ಸ್ವಸಹಾಯ ಸಂಘಗಳನ್ನು, ಉತ್ಪಾದನಾ ಘಟಕಗಳನ್ನು ಆರಂಭಿಸಿ ಆದಾಯ ಗಳಿಸುತ್ತಿದ್ದಾರೆ’ ಎಂದರು.

‘ಹೆಣ್ಣು ಮಕ್ಕಳು ಹದಿಹರೆಯದ ವಯಸ್ಸಿನಲ್ಲಿ ಗರ್ಭವತಿಯಾಗುವ ಪ್ರಕರಣಗಳು ನ್ಯಾಯಾಲಯಕ್ಕೆ ಬರುತ್ತಿರುವುದು ಆತಂಕಕಾರಿ. ಇದು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದು, ಪೋಷಕರು ಮಕ್ಕಳ ಬಗ್ಗೆ ಗಮನ ನೀಡಬೇಕಿದೆ. ಹೆಣ್ಣು ಮಕ್ಕಳು ಮೊಬೈಲ್ ಬಳಸುವಲ್ಲಿಯೂ ಎಚ್ಚರವಹಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್, ಸಹಾಯಕ ಸರ್ಕಾರಿ ಅಭಿಯೋಜಕಿ ಪಾರ್ವತಿ, ವಕೀಲರ ಸಂಘದ ಅಧ್ಯಕ್ಷ ಶಿವಣ್ಣೆಗೌಡ, ಸೋಮಯ್ಯ, ಹೇಮಲತಾ ಮತ್ತು ವಕೀಲೆ ಪವಿತ್ರಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-38-467993026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.