ಹುಣಸೂರು: ನಗರದ ವಾಹನ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಾಣಿಜ್ಯ ವಹಿವಾಟು ನಡೆಯುವ ಪ್ರಮುಖ ಬೀದಿಗಳಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಕ್ರಮ ವಹಿಸಿದ್ದು, ಸಾರ್ವಜನಿಕರು ಕಡ್ಡಾಯವಾಗಿ ನಿಯಮ ಪಾಲಿಸಬೇಕು ಎಂದು ನಗರ ಠಾಣೆ ಪಿಎಸ್ಐ ತಾಜುದ್ದಿನ್ ತಿಳಿಸಿದ್ದಾರೆ.

ನಗರದ ಕಾರ್ಖಾನೆ ಬೀದಿಯಲ್ಲಿ ವಾಹನ ದಟ್ಟಣೆಯಿಂದಾಗಿ ಸಂಚಾರಕ್ಕೆ ತೀವ್ರ ಸಮಸ್ಯೆ ಎದುರಾಗಿತ್ತು, ಈ ಸಂಬಂಧ ಹಲವು ಸಂಘಟನೆಗಳು ಮಾಡಿದ ಮನವಿಗೆ ಕ್ರಮ ವಹಿಸಲಾಗಿದೆ. ವಾರದಲ್ಲಿ ನಿಗದಿತ ದಿನಾಂಕದಂದು ಆಯಾ ಪಾರ್ಶ್ವದಲ್ಲಿ ವಾಹನಗಳನ್ನು ನಿಲ್ಲಿಸುವಂತೆ ಸೂಚನಾ ಫಲಕ ಹಾಕಲಾಗಿದೆ. ಬೀದಿಬದಿ ತಳ್ಳುಗಾಡಿ ವ್ಯಾಪಾರಿಗಳು ಪಾದಚಾರಿಗಳಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರತಿಯೊಬ್ಬರೂ ನಿಯಮ ಪಾಲಿಸುವುದರಿಂದ ನಗರದ ಸೌಂದರ್ಯ ಹಾಗೂ ಪಾದಚಾರಿಗಳಿಗೆ ಸಹಾಯವಾಗಲಿದೆ ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-38-835016156

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.