ಹುಣಸೂರು: ‘ತಾಲ್ಲೂಕು ಆಡಳಿತವು ಕೂಡಲೇ ಆದಿಜಾಂಬವ ಸಮುದಾಯದ ಕುಂದುಕೊರತೆ ಸಭೆಯನ್ನು ಕರೆದು ಸಮಸ್ಯೆಗಳಿಗೆ ಪರಿಹಾರ ನೀಡಬೇಕು’ ಎಂದು ಆದಿಜಾಂಬವ ಸಮುದಾಯದ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಕುಮಾರ್ ಆಗ್ರಹಿಸಿದ್ದಾರೆ.

‘2025 ಫೆ.21ರಂದು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ ಮತ್ತು ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ ಜಂಟಿಯಾಗಿ ಕುಂದು ಕೊರತೆ ಸಭೆ ನಡೆಸಿದ್ದರು. ಆ ಸಭೆಯಲ್ಲಿ 50ಕ್ಕೂ ಹೆಚ್ಚು ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದರು. ಆ ಬಳಿಕ ಯಾವುದೇ ಮಾಹಿತಿ ಲಭ್ಯವಾಗಿಲ್ಲ. 1 ವರ್ಷವಾದರೂ ಸಭೆಯೂ ನಡೆದಿಲ್ಲ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸಭೆಯಲ್ಲಿ ಮನವಿ ಸ್ವೀಕರಿಸಿದ ಜನಪ್ರತಿನಿಧಿಗಳು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಕ್ರಮವಹಿಸುವಂತೆ ಸೂಚಿಸಿದ್ದರು. ಯಾವ ಹಂತದಲ್ಲಿ ಅಧಿಕಾರಿ ವರ್ಗ ಸ್ಪಂದಿಸಿ ಕ್ರಮವಹಿಸಿದ್ದಾರೆ ಎಂದು ನೊಂದವರಿಗೆ ತಿಳಿಸಬೇಕಿದೆ. ಕೂಡಲೇ ಸಭೆ ಕರೆಯಬೇಕು, ಇಲ್ಲವಾದಲ್ಲಿ ಏ.5ರ ಬಾಬು ಜಗಜೀವನರಾಮ್ ಜಯಂತಿಯಲ್ಲಿ ಸಮಾಜದವರು ಭಾಗವಹಿಸುವ ಬಗ್ಗೆ ಸಂಘಟನೆ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-38-1406693610

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.