ಹುಣಸೂರು: ‘ಉತ್ತರ ಪ್ರದೇಶದ ಹಾಥರಸ್‌ನಲ್ಲಿ ನಡೆದ ಯುವತಿ ಅತ್ಯಾಚಾರ–ಕೊಲೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮೌನ ವಹಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೆಂಬಲ ನೀಡಿದೆ’ ಎಂದು ದಸಂಸ (ಅಂಬೇಡ್ಕರ್ ವಾದ) ಬಣದ ಮಹೇಶ್ ಆರೋಪಿಸಿದರು.

ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಗುರುವಾರ ನಡೆದ ಧರಣಿಯಲ್ಲಿ ಅವರು
ಮಾತನಾಡಿದರು.

‘ಪ್ರಕರಣದಲ್ಲಿ ಯುವತಿಗೆ ರಕ್ಷಣೆ ನೀಡಬೇಕಿದ್ದ ಪೊಲೀಸರೇ ತಪ್ಪು ಮಾಡಿದ್ದಾರೆ. ಕುಟುಂಬದವರಿಗೆ ಶವ ಒಪ್ಪಿಸದೇ ರಾತ್ರೋರಾತ್ರಿ ಅಂತ್ಯಸಂಸ್ಕಾರ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದರೆ ಪರಿಶಿಷ್ಟ ಜಾತಿಯವರಿಗೆ ಅನ್ಯಾಯ ಆಗಿರುವುದು ಗೊತ್ತಾಗುತ್ತದೆ’ ಎಂದು ಆಕ್ರೋಶ
ವ್ಯಕ್ತಪಡಿಸಿದರು.

ಜಿಲ್ಲಾ ಪ್ರಧಾನ ಸಂಚಾಲಕ ಬನ್ನಹಳ್ಳಿ ಸೋಮಣ್ಣ ಮಾತನಾಡಿ, ‘ದೇಶದಲ್ಲಿ ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯ, ಅತ್ಯಾಚಾರ ಘಟನೆಗಳು ಮರುಕಳಿಸುತ್ತಿವೆ. ಆಡಳಿತ ಯಂತ್ರ ಕುಸಿದಿದ್ದು, ಕಾನೂನಿನ ರಕ್ಷಣೆ ಇಲ್ಲವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಶಿವಕುಮಾರ್, ವೆಂಕಟೇಶ್, ದೊಡ್ಡಸಿದ್ದು ಹಾದನೂರು, ವಸಂತ ಹೊನ್ನೇನಹಳ್ಳಿ,
ಮಹದೇವ್, ಶೇಖರ್ ವೈ.ಪಿ. ಸಣ್ಣಕುಮಾರ್, ಗಜೇಂದ್ರ, ಎಚ್.ಎಸ್.ಲೋಕೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.