ಹುಣಸೂರು/ ಎಚ್.ಡಿ.ಕೋಟೆ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಬುಧವಾರ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.

ಹುಣಸೂರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದ್ದು, ಸಿಡಿಲಿಗೆ ಕೃಷಿ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ.

ತಾಲ್ಲೂಕಿನ ಹೊಸಪುರ ಗ್ರಾಮದಲ್ಲಿ ಹೊಗೆಸೊಪ್ಪು ನಾಟಿ ಕೆಲಸ ನಿರ್ವಹಿಸುತ್ತಿದ್ದ ಯಶೋದಮ್ಮ (50) ಮೃತರು. ಹಠಾತನೆ ಮಳೆ ಆರಂಭವಾಗಿದ್ದು, ಜಮೀನಿನಿಂದ ಹಿಂದಿರುಗುತ್ತಿದ್ದರು. ಆ ಸಮಯದಲ್ಲಿ ಸಿಡಿಲು ಬಡಿತಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ ಬೋರೇಗೌಡ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಭೇಟಿ: ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ತಾಲ್ಲೂಕು ಆಡಳಿತಕ್ಕೆ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದರು.

ಪರಿಹಾರ: ಸ್ಥಳಕ್ಕೆ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಣಾಧಿಕಾರಿ ಶ್ರೀಧರ್ ಮತ್ತು ಗ್ರಾಮಲೆಕ್ಕಿಗರ ತಂಡ ಭೇಟಿ ನೀಡಿ ಸ್ಥಳ ಮಹಜರ್ ನಡೆಸಿ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಮೃತರ ಕುಟುಂಬಕ್ಕೆ ಪರಿಹಾರವನ್ನು ಕಂದಾಯ ಇಲಾಖೆ ವತಿಯಿಂದ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಜಾನುವಾರು ಮೇಯಿಸಲು ಹೋಗಿದ್ದ ವೇಳೆ ಸಾವು

ಎಚ್.ಡಿ.ಕೋಟೆ: ತಾಲ್ಲೂಕಿನ ಎನ್. ಬೆಳ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಳದ ಹಾಡಿಯ ನಿವಾಸಿ ಅಪ್ಪಯ್ಯ(60) ಜಾನುವಾರು ಮೇಯಿಸಲು ಹೋಗಿದ್ದ ಸಂದರ್ಭ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಧ್ಯಾಹ್ನ ಒಂದು ಗಂಟೆಯಲ್ಲಿ ಗುಡುಗುಸಹಿತ ಮಳೆಯಾಗುತ್ತಿದ್ದು, ಆ ವೇಳೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ನಿವಾಸಿ ಸೋಮೇಶ್ ತಿಳಿಸಿರುತ್ತಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಚ್.ಡಿ.ಕೋಟೆ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ. ಅಪ್ಪಯ್ಯ ಅವರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-38-1362839789

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.