ಹುಣಸೂರು: ಹುಣಸೂರು –ಕೆ.ಆರ್.ನಗರ ಮುಖ್ಯ ರಸ್ತೆಯಲ್ಲಿ ₹ 5 ಕೋಟಿ ವೆಚ್ಚದಲ್ಲಿ ಆರ್.ಟಿ.ಒ ಇಲಾಖೆಯಿಂದ ನಿರ್ಮಿಸಲು ಉದ್ದೇಶಿಸಿರುವ ವಾಹನಗಳ ಚಾಲನಾ ಪರೀಕ್ಷಾ ಪಥ (ಟೆಸ್ಟಿಂಗ್ ಟ್ರ್ಯಾಕ್) ಕಾಮಗಾರಿಗೆ ಶಾಸಕ ಜಿ.ಡಿ.ಹರೀಶ್ ಗೌಡ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಹುಣಸೂರು ಉಪವಿಭಾಗದ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಚಾಲನಾ ಪರವಾನಿಗೆ ನೀಡುವವರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲೇ ಪರೀಕ್ಷೆ ನಡೆಸಬೇಕಾದ ಪರಿಸ್ಥಿತಿ ಇತ್ತು. ಹಲವು ವರ್ಷಗಳ ಬೇಡಿಕೆಗೆ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಸ್ಥಳ ದೊರಕಿದ್ದು, ಆಧುನಿಕ ಟ್ರ್ಯಾಕ್ ಅನ್ನು ನಿರ್ಮಿಸಲಾಗುವುದು’ ಎಂದರು.

‘ಟ್ರ್ಯಾಕ್ ನಿರ್ಮಾಣ ನಂತರದಲ್ಲಿ ಕಚೇರಿ ನಿರ್ಮಿಸುವ ಉದ್ದೇಶವಿದ್ದು ಅದಕ್ಕಾಗಿ 4 ಎಕರೆ ಸರ್ಕಾರಿ ಭೂಮಿ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಹಾರಂಗಿ ನೀರಾವರಿ ಇಲಾಖೆ ಆವರಣದಲ್ಲಿರುವ ಕಚೇರಿಯನ್ನು ಈ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮವಹಿಸುತ್ತೇವೆ’ ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ‘ಸಾರ್ವಜನಿಕರು ಕಡ್ಡಾಯವಾಗಿ ಚಾಲನಾ ಪರವಾನಿಗೆ ಪಡೆದು ವಾಹನ ಚಲಾಯಿಸಬೇಕು. ಬೈಕ್ ವಾಹನ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಂಜುನಾಥ್, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ನಯಾಜ್ ಪಾಶಾ, ಅಧೀಕ್ಷಕ ಕೆ.ಡಿ.ಸತೀಶ್, ಹಿರಿಯ ಮೋಟಾರ್ ವಾಹನ ನಿರೀಕ್ಷಕ ಡಿ.ಎಂ.ಮಹೇಶ್, ಮೋಟಾರ್ ವಾಹನ ನಿರೀಕ್ಷಕ ತ್ಯಾಗರಾಜ್, ಮುಖಂಡರಾದ ಗಣೇಶ್ ಗೌಡ, ಸತೀಶ್ ವಿ.ಪಾಪಣ್ಣ, ಸುರೇಂದ್ರ, ಬಸವಲಿಂಗಯ್ಯ, ದಾ.ರಾ.ಮಹೇಶ್ ಸಿಬ್ಬಂದಿ ಅನಿಶ್, ಶಾರದದೇವಿ, ಮಹದೇವ್, ಶಾಮಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-38-1066381018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.