ಹುಣಸೂರು: ಗ್ರಾಮೀಣ ಪ್ರದೇಶದಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ಮಾನವೀಯ ಸಂಬಂಧ ಮತ್ತು ಮೌಲ್ಯಗಳಿಗೆ ಹೆಚ್ಚು ಮನ್ನಣೆ ನೀಡಿ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸಬೇಕು ಎಂದು ತಾ.ಪಂ ಇಒ ಹೊಂಗಯ್ಯ ಹೇಳಿದರು.

ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಅತ್ಯುತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತ್ತೀಚಿನ ದಿನದಲ್ಲಿ ಸರ್ಕಾರಿ ನೌಕರಿ ಸಿಗುವುದು ಸವಾಲಾಗಿದ್ದು, ಈ ಸವಾಲುಗಳ ನಡುವೆ ನೌಕರಿ ಪಡೆದು ಸಾಮಾಜಿಕ ಸೇವೆಯಲ್ಲಿ ತೊಡಗಿಕೊಳ್ಳಲು ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸಕಾರಾತ್ಮಕವಾಗಿ ಬಳಸಿಕೊಂಡು ಜನರೊಂದಿಗೆ ಬೆರೆತು ಸರ್ಕಾರದ ಸವಲತ್ತು ಅಗತ್ಯ ಇರುವವರಿಗೆ ತಲುಪಿಸಬೇಕು. ಸಾಮಾಜಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿ ಅತ್ಯುತ್ತಮ ಮಹಿಳಾ ಸ್ನೇಹಿ ಯೋಜನೆ ಅನುಷ್ಠಾನಗೊಳಿಸಿದ, ತೆರಿಗೆ ಸಂಗ್ರಹಿಸಿದ ಮತ್ತು ಅರಿವು ಕೇಂದ್ರವನ್ನು ಉತ್ತಮವಾಗಿ ನಿರ್ವಹಣೆ ಮಾಡಿದ ಪಿಡಿಒಗಳಾದ ರಾಮಣ್ಣ, ರಾಘವೇಂದ್ರ ಪ್ರಸನ್ನ, ಎಚ್.ಮಹದೇವಸ್ವಾಮಿ ಸೇರಿದಂತೆ ಬಿಳಿಕೆರೆ ಗ್ರಾ.ಪಂ ಗ್ರಂಥಾಲಯದ ಮೇಲ್ವಿಚಾರಕಿ ಶಿವಕೃಷ್ಣ ಅವರನ್ನು ಗೌರವಿಸಲಾಯಿತು.

ಯೋಜನಾಧಿಕಾರಿ ರಾಜೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅಶೋಕ್, ಮಹೇಶ್ ನಾಯಕ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-38-379936201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.